India Pakistan War: ಪಂಜಾಬ್‌ನಲ್ಲಿ ಹೈ ಅಲರ್ಟ್, ಗುರುದಾಸ್ಪುರದಲ್ಲಿ ಸಂಪೂರ್ಣ ಪವರ್ ಕಟ್!

India Pakistan War: 1968ರ ನಾಗರಿಕ ರಕ್ಷಣಾ ಕಾಯಿದೆಯಡಿ ಗುರುದಾಸ್ಪುರ ಜಿಲ್ಲೆಯಲ್ಲಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ಸಂಪೂರ್ಣವಾಗಿ ವಿದ್ಯುತ್ ಅನ್ನು ಕಡಿತ ಮಾಡುವಂತೆ ನಿರ್ದೇಶನ ಮಾಡಲಾಗಿದೆ.

Written by - Yashaswini V | Last Updated : May 8, 2025, 07:29 PM IST
  • ಶತ್ರು ರಾಷ್ಟ್ರ ಪಾಕಿಸ್ತಾನವು ಗಡಿಯಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣವಾಗಿದೆ.
  • ಯಾವುದೇ ಕ್ಷಣದಲ್ಲಿ ಯುದ್ಧ ನಡೆಯಬಹದು ಎಂದು ಭಾರತ ಸರ್ಕಾರವು ಪಂಜಾಬ್‌ನಲ್ಲಿ ಹೈ ಅಲರ್ಟ್ ಘೋಷಿಸಿದೆ.
  • ಪಾಕಿಸ್ತಾನದ ಸೇನೆ ಭಾರತದ ಗಡಿ ನುಸುಳುವ ಪ್ರಯತ್ನಿಸುತ್ತಿರುವುದರಿಂದ ಯುದ್ಧ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.
India Pakistan War: ಪಂಜಾಬ್‌ನಲ್ಲಿ ಹೈ ಅಲರ್ಟ್, ಗುರುದಾಸ್ಪುರದಲ್ಲಿ ಸಂಪೂರ್ಣ ಪವರ್ ಕಟ್!

India Pakistan War: ಜಮ್ಮು ಕಾಶ್ಮೀರದಲ್ಲಿ ಪೆಹಲ್ಗಾಮ ಭಯೋತ್ಪಾದನಾ ಕೃತ್ಯ ನಡೆದು 26 ಜನ ಅಮಾಯಕ ಪ್ರವಾಸಿಗರು ಹತ್ಯೆಯಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಘರ್ಷಣೆ ಉದ್ವಿಘ್ನಗೊಂಡಿತ್ತು. ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಸಂಭವವೂ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಲೇ ಇದೆ. ಹಿನ್ನೆಲೆಯಲ್ಲಿ ಭಾರತವು ತನ್ನ ಗಡಿ ಪ್ರದೇಶದಲ್ಲಿ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Add Zee News as a Preferred Source

ಶತ್ರು ರಾಷ್ಟ್ರ ಪಾಕಿಸ್ತಾನವು ಗಡಿಯಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣವಾಗಿದೆ. ಯಾವುದೇ ಕ್ಷಣದಲ್ಲಿ ಯುದ್ಧ ನಡೆಯಬಹದು ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಭಾರತವು ಪಂಜಾಬ್‌ನಲ್ಲಿ ಹೈ ಅಲರ್ಟ್ ಘೋಷಿಸಿದೆ. ಅಲ್ಲದೆ ಗಡಿಗೆ ಹೊಂದಿಕೊಂಡಂತಿರುವ ಗುರುದಾಸ್ಪುರ ಜಿಲ್ಲೆಯ ಮೇಲೆ ರಾತ್ರಿ ವೇಳೆ ಪಾಕ್ ಸೇನೆ ದಾಳಿ ಮಾಡಬಹುದೆಂದು ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ- ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಬೆಳಗಾವಿಯ ಸೊಸೆ ಸುಫೀಯಾ!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 1968ರ ನಾಗರಿಕ ರಕ್ಷಣಾ ಕಾಯಿದೆಯಡಿ ಗುರುದಾಸ್ಪುರ ಜಿಲ್ಲೆಯಲ್ಲಿ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ಸಂಪೂರ್ಣವಾಗಿ ವಿದ್ಯುತ್ ಅನ್ನು ಕಡಿತ ಮಾಡುವಂತೆ ನಿರ್ದೇಶನ ಮಾಡಿವೆ. ಇದಲ್ಲದೆ ಪಂಜಾಬ್ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ- Operation Sindoor: ಬಿಕ್ಕಟ್ಟನ್ನು ರಾಜತಾಂತ್ರಿಕವಾಗಿ ಬಗೆಹರಿಸಿಕೊಳ್ಳಿ: ಇಂಡಿಯಾ-ಪಾಕ್​ಗೆ ಯುಕೆ ಒತ್ತಾಯ

ಇದೇ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮದಲ್ಲಿ ಭಯೋತ್ಪಾದಕರ ಕುಕೃತ್ಯಕ್ಕೆ 26 ಮಂದಿ ಅಮಾಯಕ ಪ್ರವಾಸಿಗರು ಬಲಿಯಾಗಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತವು ಬುಧವಾರ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮಾಡಿ ಉಗ್ರರ ಅಡಗುತಾಣಗಳನ್ನು ನೆಲಸಮ ಮಾಡಿತ್ತು. ಪಾಕಿಸ್ತಾನದ ಸೇನೆ ಭಾರತದ ಗಡಿ ನುಸುಳುವ ಪ್ರಯತ್ನ ನಡೆಸಿತ್ತು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News