Covid variant JN.1: ದೇಶದಲ್ಲಿ ಕೋವಿಡ್ ರೂಪಾಂತರಿ JN.1 ಉಲ್ಬಣ: ಕರ್ನಾಟಕದಲ್ಲಿ 1 ಸಾವು!
Covid variant JN.1: ಸೋಮವಾರದವರೆಗೆ 6 ಕೋವಿಡ್ -19 ಸಾವುಗಳು ವರದಿಯಾಗಿವೆ. ಈ ಪೈಕಿ ಕೇರಳದಲ್ಲಿ 5 ಮತ್ತು ಉತ್ತರ ಪ್ರದೇಶದಲ್ಲಿ 1 ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕರ್ನಾಟಕದಲ್ಲಿ ಮಂಗಳವಾರ 1 ಕೋವಿಡ್ -19 ಸಾವು ವರದಿಯಾದ ನಂತರ ಸಾವಿನ ಸಂಖ್ಯೆ ಈಗ 7ಕ್ಕೆ ಏರಿಕೆಯಾಗಿದೆ.
Covid variant JN.1: ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಮಂಗಳವಾರ 142 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,970ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್‍ಗೆ ಕರ್ನಾಟಕದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಹೊಸ ಕೊರೊನಾ ವೈರಸ್‍ಗೆ ಸೋಮವಾರದವರೆಗೆ 6 ಸಾವುಗಳು ವರದಿಯಾಗಿತ್ತು. ಈ ಫೈಕಿ ಕೇರಳದಲ್ಲಿ 5 ಮತ್ತು ಉತ್ತರ ಪ್ರದೇಶದಲ್ಲಿ 1 ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಮಾಹಿತಿ ನೀಡಿವೆ. ಕರ್ನಾಟಕದಲ್ಲಿ ಮಂಗಳವಾರ ಒಂದು ಕೋವಿಡ್ -19 ಸಾವು ವರದಿಯಾದ ನಂತರ ಸಾವಿನ ಸಂಖ್ಯೆ ಈಗ 7ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4.44 ಕೋಟಿಗೆ (4,44,70,076) ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆ ದರವನ್ನು ಶೇ.98.81ರಷ್ಟಕ್ಕೆ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವಿನ ಪ್ರಮಾಣವು ಶೇ.1.19ರಷ್ಟಿದೆ. ಕೇರಳದಲ್ಲಿ ಒಂದೇ ದಿನದಲ್ಲಿ 115 ಕೋವಿಡ್ -19 ಪ್ರಕರಣಗಳ ಹೆಚ್ಚಳ ಕಂಡುಬಂದಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 1,749 ರಷ್ಟಿದೆ. ಕೇರಳದ ನೆರೆಯ ರಾಜ್ಯವಾದ ಕರ್ನಾಟಕದಲ್ಲಿ ಸೋಮವಾರ 10 ಕೋವಿಡ್ -19 ಪ್ರಕರಣಗಳು ಕಂಡುಬಂದಿವೆ. ಸೋಮವಾರ ಭಾರತದಲ್ಲಿ 260 ಹೊಸ ಕೋವಿಡ್ -19 ಪ್ರಕರಣಗಳು ಕಂಡುಬಂದಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,828ಕ್ಕೆ ಏರಿದೆ. ಇದುವರೆಗೆ ದೇಶದಾದ್ಯಂತ 220.67 ಕೋಟಿ ಕೋವಿಡ್-19 ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದ ಥೀಮ್‌ನಲ್ಲಿ 5000 ಡೈಮಂಡ್‌ಗಳ ನೆಕ್ಲೇಸ್: ವಿಡಿಯೋ ವೈರಲ್!
ಕಡ್ಡಾಯ ಮಾಸ್ಕ್ ಧರಿಸುವಂತೆ ಸಲಹೆ!
ಹಿರಿಯ ನಾಗರಿಕರು ಮತ್ತು ಕೊಮೊರ್ಬಿಡಿಟಿ ಇರುವವರು ಮಾಸ್ಕ್ ಧರಿಸುವಂತೆ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಸಲಹೆ ನೀಡಿದ್ದಾರೆ. ಕೇರಳ ಮತ್ತು ಇತರ ರಾಜ್ಯಗಳಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಮುಂಜಾಗೃತಾ ಕ್ರಮವಾಗಿ ಈ ಸಲಹೆ ಪಾಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
‘ರಾಜ್ಯದ ಜನರು ಯಾವುದೇ ರೀತಿ ಭಯಪಡುವ ಅಗತ್ಯವಿಲ್ಲ. ನಾವು ಈಗಾಗಲೇ ಈ ಬಗ್ಗೆ ಸಭೆ ನಡೆಸಿದ್ದೇವೆ. ಹೊಸ ಕೊರೊನಾ ವೈರಸ್ ನಿಯಂತ್ರಣಕ್ಕೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚಿಸಿದ್ದೇವೆ. ನಾವು ಶೀಘ್ರದಲ್ಲೇ ಈ ಬಗ್ಗೆ ಸಾರ್ವಜನಿಕರಿಗೆ ಸಲಹೆಯನ್ನು ನೀಡುತ್ತೇವೆ. 60 ವರ್ಷಕ್ಕಿಂತ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರು ಮತ್ತು ಕೊಮೊರ್ಬಿಡಿಟಿ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು’ ಎಂದು ಹೇಳಿದ್ದಾರೆ.
ಇದನ್ನೂ ಓದಿ: Coronavirus: ಕೇರಳ ಬಳಿಕ ಈ ಎರಡೂ ರಾಜ್ಯಗಳಲ್ಲಿ ಆಂತಕ ಹೆಚ್ಚಿಸಿದ JN.1 ರೂಪಾಂತರ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.