ದೇಶದಲ್ಲಿ 6,050 ಹೊಸ ಕೋವಿಡ್ ಪ್ರಕರಣ: ಆರೋಗ್ಯ ಸಚಿವರಿಂದ ಉನ್ನತ ಮಟ್ಟದ ಸಭೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,050 ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ರಾಜ್ಯ ಆರೋಗ್ಯ ಸಚಿವರೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ನವದೆಹಲಿ: ದೇಶದಲ್ಲಿ ಶುಕ್ರವಾರ 6,050 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ನಿನ್ನೆಗಿಂತ(ಏಪ್ರಿಲ್ 6) ಕೊರೊನಾ ವೈರಸ್ ಪ್ರಕರಣಗಳಲ್ಲಿ ಶೇ.13ರಷ್ಟು ಏರಿಕೆ ಕಂಡಿದೆ.
ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಮಾರಕ ವೈರಸ್‍ಗೆ 14 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5,30,943ಕ್ಕೆ ಏರಿಕೆಯಾಗಿದೆ. ಇದುವರೆಗೆ ಆಸ್ಪತ್ರೆಯಿಂದ 4,41,85,858 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳ ಜೊತೆಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಡೆಹರಾಡೂನ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ ! ನಾಲ್ಕು ಮಂದಿ ಸಾವು
ಇದಕ್ಕೂ ಮುನ್ನ ಸಭೆಯ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್, ‘ಕೇಂದ್ರವು ಕೋವಿಡ್ -19 ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿಯಮಿತವಾಗಿ ಮಾರ್ಗಸೂಚಿಗಳನ್ನು ನೀಡಿದೆ. ಪ್ರಧಾನಿ ಮೋದಿಯವರು ಈ ಕುರಿತು ಎಲ್ಲಾ ರಾಜ್ಯಗಳೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಇಂದು ಆರೋಗ್ಯ ಸಚಿವ ಮಾಂಡವಿಯಾ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ’ ಎಂದು ತಿಳಿಸಿದರು.
ದೇಶದಲ್ಲಿ ದೈನಂದಿನ ಪಾಸಿಟಿವಿಟಿ ದರವು ಶೇ.3.39 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರವು ಶೇ.3.02ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಗುರುವಾರ ಒಟ್ಟು 1,78,533 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
Work From Home Scam: 8 ಲಕ್ಷ ರೂ. ರೂ. ಕಳೆದುಕೊಂಡ ಕರ್ನಾಟಕದ ಮಹಿಳೆ!
ಕಳೆದ 24 ಗಂಟೆಗಳಲ್ಲಿ ಒಟ್ಟು 2,334 ಡೋಸ್ ಲಸಿಕೆ ನೀಡಲಾಗಿದೆ. 2021ರ ಜನವರಿ 16ರಂದು ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾದಾಗಿನಿಂದ ಒಟ್ಟು 2,20,66,20,700 ಮಂದಿಗೆ ಲಸಿಕೆ ನೀಡಲಾಗಿದೆ. 9,422 ಸಕ್ರಿಯ ಪ್ರಕರಣಗಳೊಂದಿಗೆ ಕೇರಳವು ಅತಿಹೆಚ್ಚು ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. 265 ಹೊಸ ಪ್ರಕರಣಗಳೊಂದಿಗೆ ದೆಹಲಿಯಲ್ಲಿ 2,060 ಸಕ್ರಿಯ ಪ್ರಕರಣಗಳು ದಾಖಲಾಗಿದ್ದರೆ, ಮಹಾರಾಷ್ಟ್ರದಲ್ಲಿ ಒಟ್ಟು 3,987 ಸಕ್ರಿಯ ಪ್ರಕರಣಗಳು ವರದಿಯಾಗಿವೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.