ನವದೆಹಲಿ: ಪ್ರಧಾನಮಂತ್ರಿ ಮೋದಿ ಮಂಗಳವಾರದಂದು ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ನೀಡಿರುವ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸುವ ಕುರಿತಾಗಿ ಆಯೋಜಿಸಲಾಗಿದ್ದ ವೆಬಿನಾರ್‌ ಒಂದರಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಈ ವರ್ಷದ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮೀಸಲಿಟ್ಟಿರುವ ಅನುದಾನ ಅಭೂತಪೂರ್ಣವಾಗಿದೆ. ಇದು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಇದು ಉತ್ತಮ ಆರೋಗ್ಯ ಸೇವೆ ಒದಗಿಸುವ ನಮ್ಮ ಬದ್ಧತೆಯ ಸಂಕೇತವಾಗಿದೆ ಎಂದು ಪಿಎಂ ಮೋದಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೊರೋನಾ ಕಲಿಸಿದ ಪಾಠದ ಬಗ್ಗೆ ಮೋದಿ ಉಲ್ಲೇಖ:


ಇದೇ ಸಂದರ್ಭದಲ್ಲಿ ಕೊರೋನಾ ಕಲಿಸಿದ ಪಾಠದ ಬಗ್ಗೆಯೂ ಉಲ್ಲೇಖಿಸಿದ ಪಿಎಂ ಮೋದಿ(PM Modi)ರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ವಿಭಾಗಗಳನ್ನು ಮತ್ತಷ್ಟು ಬಲಶಾಲಿಯಾಗಿಸಬೇಕು' ಎಂದಿದ್ದಾರೆ.


Smriti Irani: ಅಮೇಥಿಯಲ್ಲಿ ಹೊಸ ಜಾಗ ಖರೀದಿಸಿದ ಸ್ಮೃತಿ ಇರಾನಿ..!


ಕೊರೋನಾ(Corona) ಕಾಲದಲ್ಲಿ ಭಾರತ ಆರೋಗ್ಯ ಕ್ಷೇತ್ರದಲ್ಲಿ ತೋರಿದ ಬಲ ಮತ್ತು ದೇಶ ತೋರಿಸಿದ ಅನುಭವ ಹಾಗೂ ಶಕ್ತಿ ಪ್ರದರ್ಶನವನ್ನು ಇತರ ದೇಶಗಳು ಬಹಳ ಸೂಕ್ಷ್ಮವಾಗಿ ಗಮನಿಸಿವೆ. ಇಂದು ಇಡೀ ವಿಶ್ವವೇ ಭಾರತದ ಆರೋಗ್ಯ ಕ್ಷೇತ್ರದ ಘನತೆ ಹಾಗೂ ಭಾರತದ ಆರೋಗ್ಯ ಕ್ಷೇತ್ರದ ಮೇಲಿರುವ ವಿಶ್ವಾಸ ಮತ್ತೊಂದು ಹಂತ ತಲುಪಿದೆ ಎಂದೂ ಮೋದಿ ಹೇಳಿದ್ದಾರೆ.


Sarkari Naukri: ನೇರ ನೇಮಕಾತಿ, 10ನೇ ತರಗತಿ ಪಾಸ್ ಆದವರಿಗೆ ಸುವರ್ಣಾವಕಾಶ


ಭಾರತವನ್ನು ಆರೋಗ್ಯವಾಗಿಡಲು 4 ಕ್ಷೇತ್ರಗಳಲ್ಲಿ ಕೆಲಸ


 ಈ ಸಂವಾದವನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಭಾರತ(India)ವನ್ನು ಆರೋಗ್ಯಯುತವಾಗಿಡಲು ನಾಲ್ಕು ವಿಚಾರಗಳನ್ನು ಆಧಾರವಾಗಿಟ್ಟುಕೊಂಡು ಕೆಲಸ ಮಾಡುವುದಾಗಿ ಈ ಸಂವಾದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.


*ರೋಗಗಳನ್ನು ತಡೆಗಟ್ಟುವಿಕೆ, ಅಂದರೆ ರೋಗದಿಂದ ರಕ್ಷಿಸಿಕೊಳ್ಳುವುದು.


Coronavirus ಪ್ರಕರಣ ಏಕಾಏಕಿ ಹೆಚ್ಚಾದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ವಿಶೇಷ ಸೂಚನೆ


*ಕಡು ಬಡವರಿಗೂ ಅತ್ಯಂತ ಕಡಿಮೆ ವೆಚ್ಚದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡುವುದು. ಆಯುಷ್ಮಾನ್ ಭಾರತ್ ಯೋಜನೆ ಮತ್ತು ಪ್ರಧಾನ್ ಮಂತ್ರಿ ಜನೌಷಧಿಯಂತಹ ಯೋಜನೆಗಳು ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿವೆ.


Petrol Rate: ಕಾಂಗ್ರೆಸ್‌ ಸರ್ಕಾರವಿರುವ ರಾಜ್ಯದಲ್ಲೇ ಪೆಟ್ರೋಲ್‌ ದರ ಹೆಚ್ಚಳ..!


*ಆರೋಗ್ಯ ಮೂಲಸೌಕರ್ಯ ಮತ್ತು ಆರೋಗ್ಯ ಕಾರ್ಯಕರ್ತರ ಪ್ರಮಾಣ ಮತ್ತು ಗುಣಮಟ್ಟ ಹೆಚ್ಚಿಸುವುದು.


*ಸಮಸ್ಯೆಗಳನ್ನು ನಿವಾರಿಸಲು ಮಿಷನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುವುದು. ಈ ನಿಟ್ಟಿನಲ್ಲಿ ಮಿಷನ್ ಇಂದ್ರಧಸುಷ್‌ನ್ನು ದೇಶದ ಬುಡಕಟ್ಟು ಮತ್ತು ದೂರದ ಪ್ರದೇಶಗಳಿಗೆ ವಿಸ್ತರಿಸುವುದು.


PM Modi: ಐದು ರಾಜ್ಯಗಳ ವಿಧಾನಸಭೆ ಎಲೆಕ್ಷನ್ ದಿನಾಂಕ ಬಗ್ಗೆ ಸುಳಿವು ನೀಡಿದ ಪ್ರಧಾನಿ ಮೋದಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.