ನವದೆಹಲಿ: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಸಮೀಪ ಭಾರತೀಯ ವಾಯುಪಡೆಯ ಮಿಗ್ -29 (MiG-29) ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಆದಾಗ್ಯೂ ಪೈಲಟ್ ವಿಮಾನದಿಂದ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ.


COMMERCIAL BREAK
SCROLL TO CONTINUE READING

 ಪೈಲಟ್ ಸುರಕ್ಷಿತವಾಗಿ ವಿಮಾನದಿಂದ ಹೊರಬರಲು ಯಶಸ್ವಿಯಾಗಿದ್ದಾರೆ ಎಂದು ವಾಯುಪಡೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.


ಮಾಹಿತಿಯ ಪ್ರಕಾರ ವಿಮಾನದಲ್ಲಿನ ತಾಂತ್ರಿಕ ಅಡಚಣೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿದುಬಂದಿದೆ.