operation sindoor ಮೊದಲ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ ! ಹೇಗಿತ್ತು ನೋಡಿ ಪಾಕ್ ಮೇಲಿನ ಅಟ್ಯಾಕ್

operation sindoor first Video : ಆಪರೇಶನ್ ಸಿಂಧೂರ್ ನ ಮೊದಲ ವಿಡಿಯೋವನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ.  ಭಯೋತ್ಪಾದಕರ ಅಡಗುತಾಣವನ್ನು ಗುರಿಯಾಗಿರಿಸಿಕೊಂಡು ಯಾವ ರೀತಿಯಲ್ಲಿ ದಾಳಿ ನಡೆಸಲಾಗಿದೆ ಎನ್ನುವುದನ್ನು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. 

Written by - Ranjitha R K | Last Updated : May 7, 2025, 04:36 PM IST
  • ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಪ್ರತೀಕಾರ
  • ಪಾಕ್ ಆಕ್ರಮಿತ ಕಾಶ್ಮೀರದೊಳಗಿನ ಭಯೋತ್ಪಾದಕ ಅಡಗುತಾಣ ಧ್ವಂಸ
  • 100 ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ
operation sindoor ಮೊದಲ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ ! ಹೇಗಿತ್ತು ನೋಡಿ ಪಾಕ್ ಮೇಲಿನ ಅಟ್ಯಾಕ್

operation sindoor first Video : ಕೊನೆಗೂ ಭಾರತ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಪ್ರತೀಕಾರ ತೀರಿಸಿಕೊಂಡಿತು. ಮಂಗಳವಾರ ರಾತ್ರಿ 1:05 ಕ್ಕೆ ಪಾಕಿಸ್ತಾನ ಮತ್ತು ಪಿಒಕೆ ಅಂದರೆ ಪಾಕ್ ಆಕ್ರಮಿತ ಕಾಶ್ಮೀರದೊಳಗಿನ ಭಯೋತ್ಪಾದಕ ಅಡಗುತಾಣದಲ್ಲಿ ಭಾರತೀಯ ಸೇನೆಯು ಧ್ವಂಸ ಮಾಡಿದೆ.  ಅದಾದ ನಂತರ ಇಡೀ ಪಾಕಿಸ್ತಾನದಲ್ಲಿ ಅವ್ಯವಸ್ಥೆ ನೆಲೆಸಿದೆ. ಈ ದಾಳಿಯಲ್ಲಿ ಭಾರತೀಯ ಸೇನೆಯು ಭಯೋತ್ಪಾದಕರ 9 ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದರಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಪಹಲ್ಗಾಮ್ ದಾಳಿಯ 15 ದಿನಗಳ ನಂತರ ಭಾರತ ಈ ಪ್ರತೀಕಾರದ ಕ್ರಮವನ್ನು ತೆಗೆದುಕೊಂಡಿದ್ದು, ಇದನ್ನು 'ಆಪರೇಷನ್ ಸಿಂಧೂರ್' ಎಂದು ಹೆಸರಿಸಲಾಗಿದೆ.

Add Zee News as a Preferred Source

'ಆಪರೇಷನ್ ಸಿಂಧೂರ್' ನ ಮೊದಲ ವಿಡಿಯೋ  ಬಿಡುಗಡೆ : 
ದಾಳಿಯ ಮೊದಲ ವಿಡಿಯೋವನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಸೇನೆಯು ಭಯೋತ್ಪಾದಕರ ಅಡಗುತಾಣವನ್ನು ಹೇಗೆ ನಾಶಪಡಿಸಿತು  ಎನ್ನುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. 

ಇದನ್ನೂ ಓದಿ : ಅತಿ ಹೆಚ್ಚು ಪರಮಾಣು ಬಾಂಬ್‌ ಹೊಂದಿರುವ ದೇಶ ಯಾವುದು? ಭಾರತವಾ.. ಪಾಕಿಸ್ತಾನವಾ..? ಯುದ್ಧ ಮುಂದುವರೆದ್ರೆ ಇದ್ರ ಬಳಕೆ ಆಗುತ್ತಾ?

ಪಾಕ್ ಆಕ್ರಮಿತ ಕಾಶ್ಮೀರದ ಕೋಟ್ಲಿಯಲ್ಲಿರುವ ಅಬ್ಬಾಸ್ ಭಯೋತ್ಪಾದಕ ಶಿಬಿರದ ಮೇಲೆ ನಡೆದ ದಾಳಿಯ ವೀಡಿಯೊವನ್ನು ಭಾರತೀಯ ಸೇನೆ ಶೇರ್ ಮಾಡಿದೆ. ಭಾರತೀಯ ಸೇನೆಯ ಪ್ರಕಾರ, ಕೋಟ್ಲಿಯಲ್ಲಿರುವ ಅಬ್ಬಾಸ್ ಭಯೋತ್ಪಾದಕ ಶಿಬಿರವು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಆತ್ಮಹತ್ಯಾ ಬಾಂಬರ್‌ಗಳಿಗೆ ತರಬೇತಿ ನೀಡುವ ಪ್ರಮುಖ ಕೇಂದ್ರವಾಗಿತ್ತು. ಅಲ್ಲಿ 50 ಕ್ಕೂ ಹೆಚ್ಚು ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿತ್ತು.

'ಆಪರೇಷನ್ ಸಿಂಧೂರ್' ಬಗ್ಗೆ ಸೇನೆ  ನೀಡಿದ ಮಾಹಿತಿ : 
'ಆಪರೇಷನ್ ಸಿಂಧೂರ್' ಕುರಿತು ಭಾರತೀಯ ಸೇನೆ, ವಾಯುಪಡೆ ಮತ್ತು ವಿದೇಶಾಂಗ ಸಚಿವಾಲಯ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಇದರಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಭಾಗವಹಿಸಿದ್ದರು. ಭಯೋತ್ಪಾದಕರ ಅಡಗುತಾಣಗಳ ಮೇಲಿನ ದಾಳಿಯ ತುಣುಕುಗಳನ್ನು ಮಿಲಿಟರಿ ಅಧಿಕಾರಿಗಳು ತೋರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಖುರೇಷಿ ಮಾತನಾಡಿ, "ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರಿಗೆ ನ್ಯಾಯ ಒದಗಿಸಲು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಯಿತು. 

 

ಇದನ್ನೂ ಓದಿ :  ಅಭಿ ಪಿಕ್ಚರ್ ಬಾಕಿ ಹೈ...': ಆಪರೇಷನ್ ಸಿಂಧೂರ್' ನಂತರ ಮಾಜಿ ಸೇನಾ ಮುಖ್ಯಸ್ಥ ಮನೋಜ್ ನರವಾಣೆ ಮಹತ್ವದ ಸುಳಿವು..!

ಮೊದಲ ಗುರಿಯಾಗಿದ್ದು ಯಾರನ್ನು?: 
"ಪಿಒಜೆಕೆಯಲ್ಲಿ ಮೊದಲ ಗುರಿ ಮುಜಫರಾಬಾದ್‌ನಲ್ಲಿರುವ ಸವಾಯಿ ನಾಲಾ ಶಿಬಿರವಾಗಿತ್ತು ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು. ಇದು ನಿಯಂತ್ರಣ ರೇಖೆಯಿಂದ 30 ಕಿ.ಮೀ ದೂರದಲ್ಲಿದೆ. ಇದು ಲಷ್ಕರ್-ಎ-ತೈಬಾದ ತರಬೇತಿ ಕೇಂದ್ರವಾಗಿತ್ತು. 2024ರ ಅಕ್ಟೋಬರ್ 20 ರಂದು ಸೋನಾಮಾರ್ಗ್, 24 ಅಕ್ಟೋಬರ್ 2024 ರಂದು ಗುಲ್ಮಾರ್ಗ್ ಮತ್ತು 22 ಏಪ್ರಿಲ್ 2025 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರು ಇಲ್ಲಿಂದಲೇ  ತರಬೇತಿ ಪಡೆದಿದ್ದರು. "ಈ ದಾಳಿಯನ್ನು ಬೆಳಗಿನ ಜಾವ 1:05 ರಿಂದ ಬೆಳಗಿನ ಜಾವ 1:30 ರ ನಡುವೆ ನಡೆಸಲಾಯಿತು. 

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದವು. ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕ ಜೀವಹಾನಿಯನ್ನು ತಪ್ಪಿಸಲು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ" ಎಂದು ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ತಿಳಿಸಿದ್ದಾರೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News