ನವ ದೆಹಲಿ: ಇತ್ತೀಚಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದನ್ನು ಆಕ್ಷೇಪಿಸಿದ್ದ ಬೀಜಿಂಗ್ ಗೆ, "ಅರುಣಾಚಲ ಪ್ರದೇಶ ದೇಶದ ಅವಿಭಾಜ್ಯ ಅಂಗ, ಹಾಗೆಯೇ ಭಾರತೀಯ ಮುಖಂಡರು ಯಾವಾಗ ಬೇಕಾದರೂ ರಾಜ್ಯಕ್ಕೆ ಭೇಟಿ ನೀಡಲು ಸ್ವತಂತ್ರರು" ಎಂದು ಹೇಳುವ ಮೂಲಕ ಭಾರತ ಬಲವಾದ ಸಂದೇಶವೊಂದನ್ನು ನೀಡಿದೆ. 


COMMERCIAL BREAK
SCROLL TO CONTINUE READING

"ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಭಾಗವಾಗಿದೆ ಮತ್ತು ಭಾರತೀಯ ನಾಯಕರು ಅರುಣಾಚಲನ್ನು ದೇಶದಲ್ಲಿ ಇತರ ರಾಜ್ಯಗಳಿಗೆ ಭೇಟಿ ನೀಡುತ್ತಿರುವುದರಿಂದ ಹೆಚ್ಚು ಸ್ವಾತಂತ್ರ್ಯವನ್ನು ಹೊಂದಿದ್ದಾರೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ಗಡಿ ವಿವಾದದಲ್ಲಿ ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳ ನಡುವಿನ ಮುಂದಿನ ಸುತ್ತಿನ ಮಾತುಕತೆಗಳ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ರವೀಶ್ ಕುಮಾರ್ ಈ ಹೇಳಿಕೆ ನೀಡಿದರು.


ವಿಶೇಷ ಪ್ರತಿನಿಧಿಗಳಿಬ್ಬರು ಪರಸ್ಪರ ಸಂಪರ್ಕದಲ್ಲಿರುತ್ತಾರೆ ಎಂದು ತಿಳಿಸಿದ ಅವರು, "ಮಾತುಕತೆಗಾಗಿ ಯಾವುದೇ ದಿನಾಂಕವನ್ನು ನಿಗದಿಗೊಳಿಸಿಲ್ಲ, ದಿನಾಂಕ ನಿಗದಿಯಾದ ನಂತರ ಮಾಧ್ಯಮಗಳಿಗೆ ತಿಳಿಸುವುದಾಗಿ ಹೇಳಿದ್ದಾರೆ".


ಕಳೆದ ವಾರಾಂತ್ಯದಲ್ಲಿ ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದನ್ನು ಸೋಮವಾರ ಚೀನಾ ಆಕ್ಷೇಪ ವ್ಯಕ್ತಪಡಿಸಿದ್ದು, 'ವಿವಾದಿತ ಪ್ರದೇಶ'ದಲ್ಲಿ ಅವರ ಪ್ರವಾಸವು ಯಾವುದೇ ಶಾಂತಿಯನ್ನು ತರಲು ಅನುಕೂಲವಾಗಿಲ್ಲ ಎಂದು ತಿಳಿಸಿದೆ.