BrahMos missile: ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತೀಯ ನೌಕಾಪಡೆ

ಶನಿವಾರದಂದು ಭಾರತೀಯ ನೌಕಾಪಡೆಯು ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ದೀರ್ಘ-ಶ್ರೇಣಿಯ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.

Last Updated : Mar 5, 2022, 04:43 PM IST
  • ಬ್ರಹ್ಮೋಸ್ ಕ್ಷಿಪಣಿಯ ಸುಧಾರಿತ ಆವೃತ್ತಿಯ ದೀರ್ಘ-ಶ್ರೇಣಿಯ ನಿಖರವಾದ ಸ್ಟ್ರೈಕ್ ಸಾಮರ್ಥ್ಯವನ್ನು ಯಶಸ್ವಿಯಾಗಿ ಮೌಲ್ಯೀಕರಿಸಲಾಗಿದೆ"
BrahMos missile: ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತೀಯ ನೌಕಾಪಡೆ title=

ನವದೆಹಲಿ: ಶನಿವಾರದಂದು ಭಾರತೀಯ ನೌಕಾಪಡೆಯು ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ದೀರ್ಘ-ಶ್ರೇಣಿಯ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.

"ಬ್ರಹ್ಮೋಸ್ ಕ್ಷಿಪಣಿಯ ಸುಧಾರಿತ ಆವೃತ್ತಿಯ ದೀರ್ಘ-ಶ್ರೇಣಿಯ ನಿಖರವಾದ ಸ್ಟ್ರೈಕ್ ಸಾಮರ್ಥ್ಯವನ್ನು ಯಶಸ್ವಿಯಾಗಿ ಮೌಲ್ಯೀಕರಿಸಲಾಗಿದೆ.ಗುರಿಯ ಪಿನ್‌ಪಾಯಿಂಟ್ ನಾಶವು ಯುದ್ಧ ಮತ್ತು ಮುಂಚೂಣಿ ವೇದಿಕೆಗಳ ಕಾರ್ಯಾಚರಣೆಯ ಸಿದ್ಧತೆಯನ್ನು ಪ್ರದರ್ಶಿಸಿದೆ" ಎಂದು ಭಾರತೀಯ ನೌಕಾಪಡೆಯ ಟ್ವೀಟ್ ಮಾಡಿದೆ.

ಇದನ್ನೂ ಓದಿ: SR Hiremath : ಗೋವು ರಕ್ಷಕರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಎಸ್.ಆರ್. ಹಿರೇಮಠ!

"ಈ ಸಾಧನೆಯು ಭಾರತೀಯ ನೌಕಾಪಡೆಯ ಸಾಮರ್ಥ್ಯವನ್ನು ಇನ್ನಷ್ಟು ಆಳವಾಗಿ ಹೊಡೆಯುವ ಮತ್ತು ಸಮುದ್ರದಿಂದ ಮತ್ತಷ್ಟು ದೂರದಲ್ಲಿರುವ ಭೂ ಕಾರ್ಯಾಚರಣೆಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಸ್ಥಾಪಿಸುತ್ತದೆ" ಎಂದು ಭಾರತೀಯ ನೌಕಾಪಡೆ ತಿಳಿಸಿದೆ."ಬ್ರಹ್ಮೋಸ್ ಕ್ಷಿಪಣಿ ಮತ್ತು  ಐಎನ್ಎಸ್  ಚೆನ್ನೈ ಎರಡೂ ಸ್ಥಳೀಯವಾಗಿ ನಿರ್ಮಿಸಲ್ಪಟ್ಟಿವೆ ಮತ್ತು ಭಾರತೀಯ ಕ್ಷಿಪಣಿ ಮತ್ತು ಹಡಗು ನಿರ್ಮಾಣದ ಪರಾಕ್ರಮದ ಅತ್ಯಾಧುನಿಕತೆಯನ್ನು ಎತ್ತಿ ತೋರಿಸುತ್ತವೆ. ಇವು ಆತ್ಮ ನಿರ್ಭರ್ ಭಾರತ್ ಮತ್ತು ಮೇಕ್ ಇನ್ ಇಂಡಿಯಾ ಪ್ರಯತ್ನಗಳಿಗೆ ಭಾರತೀಯ ನೌಕಾಪಡೆಯ ಕೊಡುಗೆಯನ್ನು ಬಲಪಡಿಸುತ್ತವೆ." ಎಂದು ತಿಳಿಸಿದೆ.

ಜನವರಿಯಲ್ಲಿ, ಭಾರತವು ಒಡಿಶಾದ ಬಾಲಸೋರ್‌ನ ಕರಾವಳಿಯಲ್ಲಿ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಆವೃತ್ತಿಯನ್ನು ಪರೀಕ್ಷಿಸಿತು.ಮಾಹಿತಿಯುಳ್ಳ ರಕ್ಷಣಾ ಮೂಲಗಳ ಪ್ರಕಾರ, ಕ್ಷಿಪಣಿಯು ಹೊಸ ತಾಂತ್ರಿಕ ಬೆಳವಣಿಗೆಗಳನ್ನು ಹೊಂದಿದ್ದು, ಇದು ಈಗ ಯಶಸ್ವಿಯಾಗಿ ಸಾಬೀತಾಗಿದೆ. 

ಇದನ್ನೂ ಓದಿ: Gadag: ಗಂಡ-ಹೆಂಡಿರ ಜಗಳದಲ್ಲಿ ಗ್ರಾಮದ ಮುಖಂಡ ಬಲಿ..!

ಬ್ರಹ್ಮೋಸ್‌ನ ವಾಯು-ಉಡಾವಣಾ ರೂಪಾಂತರವನ್ನು ನವೆಂಬರ್ 2017 ರಲ್ಲಿ ಸುಖೋಯ್-30MKI ಯಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು.ಬ್ರಹ್ಮೋಸ್ ಭಾರತೀಯ ನೌಕಾಪಡೆಯ ಯುದ್ಧನೌಕೆಗಳ ಮುಖ್ಯ ಆಯುಧ ವ್ಯವಸ್ಥೆಯಾಗಿದೆ ಮತ್ತು ಅದರ ಬಹುತೇಕ ಎಲ್ಲಾ ಮೇಲ್ಮೈ ವೇದಿಕೆಗಳಲ್ಲಿ ನಿಯೋಜಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News