ನವದೆಹಲಿ: ಅಧಿಕೃತ ಪಾಸ್‌ಪೋರ್ಟ್ ಹೊಂದಿರುವ ಭಾರತೀಯರಿಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕರ್ತಾರ್‌ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟವಾಗಿ ತಿಳಿಸಿದೆ. 


COMMERCIAL BREAK
SCROLL TO CONTINUE READING

ಬಾಬಾ ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯ ಮುನ್ನ ಕಾರ್ತಾಪುರ್ ಸಾಹಿಬ್ ಭೇಟಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಹಿನ್ನಲೆಯಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಪಾಕಿಸ್ತಾನ ಒಂದೆಡೆ ಕರ್ತಾರ್ಪುರ್ ಗೆ ಯಾರು ಭೇಟಿ ನೀಡಬಹುದು ಎನ್ನುವ ವಿಚಾರವಾಗಿ ಹಲವು ರೀತಿಯ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಈಗ ಭಾರತ ಸರ್ಕಾರ ಅಧಿಕೃತ ಪಾಸ್ ಪೋರ್ಟ್ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದೆ.


ಒಂದೆಡೆ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಕರ್ತಾರ್‌ಪುರ್ ಸಾಹಿಬ್‌ಗೆ ಭೇಟಿ ನೀಡುವವರಿಗೆ ಯಾವುದೇ ಪಾಸ್‌ಪೋರ್ಟ್ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ, ಆದರೆ ಪಾಕಿಸ್ತಾನದ ಸೇನೆಯ ವಕ್ತಾರ ಮತ್ತು ಅದರ ಅಂತರ್ ಸೇವೆಗಳ ಸಾರ್ವಜನಿಕ ಸಂಪರ್ಕದ ಮಹಾನಿರ್ದೇಶಕ ಮೇಜರ್ ಜನರಲ್ ಆಸಿಫ್ ಗಫೂರ್ ಅವರು ಯಾತ್ರಾರ್ಥಿಗಳಿಗೆ ಪಾಸ್ ಪೋರ್ಟ್ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.


ಆದಾಗ್ಯೂ, 2019 ರ ಅಕ್ಟೋಬರ್ 24 ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಸಹಿ ಹಾಕಿದ ಒಪ್ಪಂದದ ನಿಯಮಗಳು ಕರ್ತಾರ್‌ಪುರಕ್ಕೆ ಭೇಟಿ ನೀಡುವವರಿಗೆ ಅನ್ವಯವಾಗುತ್ತವೆ ಮತ್ತು ಇಮ್ರಾನ್ ಖಾನ್ ಅವರ ಟ್ವೀಟ್‌ನ ಆಧಾರದ ಮೇಲೆ ಯಾವುದೇ ಮಾನದಂಡಗಳನ್ನು ಮನ್ನಾ ಮಾಡುವುದಿಲ್ಲ ಅಥವಾ ಬದಲಾಯಿಸಲಾಗುವುದಿಲ್ಲ ಎಂದು ಭಾರತ ಹೇಳಿದೆ.