Operation sindoor: ಭಯೋತ್ಪಾದನೆಯ ಬಗ್ಗೆ ಭಾರತದ ಅಚಲ ನಿಲುವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಪುನರುಚ್ಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಷ್ಟ್ರವು ಶೂನ್ಯ ಸಹಿಷ್ಣುತೆಯ ನೀತಿಯನ್ನು ಅಳವಡಿಸಿಕೊಂಡಿದೆ ಎಂದು ಒತ್ತಿ ಹೇಳಿದ್ದಾರೆ. "ಇದು ಹೊಸ ಭಾರತ, ಗಡಿಯ ಎರಡೂ ಬದಿಗಳಲ್ಲಿ ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವ ಭಾರತ" ಎಂದು ಸಿಂಗ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಭಯೋತ್ಪಾದನೆಯ ವಿರುದ್ಧ ಬಲವಾದ ನಿಲುವನ್ನು ತೆಗೆದುಕೊಂಡಿರುವ ಸಿಂಗ್, 2016ರ ಉರಿ ದಾಳಿಯ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನೆನಪಿಸಿಕೊಂಡರು. ಪುಲ್ವಾಮಾ ದಾಳಿಯ ನಂತರ ಬಾಲಕೋಟ್ ಮೇಲೆ ವಾಯುದಾಳಿಗಳನ್ನು ನಡೆಸುವ ಮೂಲಕ ಪ್ರತಿಕ್ರಿಯೆ ನೀಡಿದ್ದೇವೆ ಎಂದು ತಿಳಿಸಿದರು. ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯಾಗಿ ಯಶಸ್ವಿಯಾಗಿ ʼಆಪರೇಷನ್ ಸಿಂಧೂರ್ʼ ನಡೆಸಿರುವ ಅವರು, ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. "ಪಹಲ್ಗಾಮ್ ಘಟನೆಯ ನಂತರ ಭಾರತವು ಪಾಕಿಸ್ತಾನದೊಳಗೆ ಪ್ರವೇಶಿಸಿ ಹೇಗೆ ಹಲವಾರು ದಾಳಿಗಳನ್ನು ನಡೆಸಿತು ಎಂಬುದನ್ನು ಈಗ ಜಗತ್ತು ನೋಡುತ್ತಿದೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ: ಫಿರೋಜ್‌ಪುರ, ಅಮೃತಸರದಲ್ಲಿ ಮತ್ತೆ ಡ್ರೋನ್ ದಾಳಿ; ಕತ್ತಲೆಯ ನಡುವೆಯೂ ಮೊಳಗಿದ ಸೈರನ್!!
"ಆಪರೇಷನ್ ಸಿಂಧೂರ್ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಬದಲಾಗಿ ಭಾರತದ ರಾಜಕೀಯ, ಸಾಮಾಜಿಕ ಮತ್ತು ಕಾರ್ಯತಂತ್ರದ ಇಚ್ಛಾಶಕ್ತಿಯ ಸಂಕೇತವಾಗಿದೆ. ಈ ಕಾರ್ಯಾಚರಣೆಯು ಭಯೋತ್ಪಾದನೆಯ ವಿರುದ್ಧ ಭಾರತದ ಬಲವಾದ ಇಚ್ಛಾಶಕ್ತಿ, ಮಿಲಿಟರಿ ಶಕ್ತಿಯ ಸಾಮರ್ಥ್ಯ ಮತ್ತು ದೃಢಸಂಕಲ್ಪದ ಪ್ರದರ್ಶನವಾಗಿದೆ. ಭಾರತ ಭಯೋತ್ಪಾದನೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಾಗಲೆಲ್ಲಾ, ಗಡಿಯಾಚೆಗಿನ ಭೂಮಿ ಕೂಡ ಭಯೋತ್ಪಾದಕರು ಮತ್ತು ಅವರ ನಾಯಕರಿಗೆ ಸುರಕ್ಷಿತವಾಗಿರುವುದಿಲ್ಲʼವೆಂಬುದನ್ನು ನಾವು ತೋರಿಸಿದ್ದೇವೆ" ಅಂತಾ ಅವರು ತಿಳಿಸಿದ್ದಾರೆ.
'आपरेशन सिंदूर' सिर्फ़ एक सैन्य कार्रवाई भर नहीं है, बल्कि भारत की राजनीतिक, सामाजिक और सामरिक इच्छाशक्ति का प्रतीक है।
हमारे प्रधानमंत्री श्री @narendramodi ने स्पष्ट कर दिया है कि यह नया भारत है जो आतंकवाद के ख़िलाफ़ सरहद के इस पार और उस पार दोनों तरफ़ प्रभावी कारवाई करता है। pic.twitter.com/Lmoj3MrYey
— Rajnath Singh (@rajnathsingh) May 11, 2025
ಉತ್ತರ ಪ್ರದೇಶದ ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜನಾಥ್ ಸಿಂಗ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು, 'ಆಪರೇಷನ್ ಸಿಂಧೂರ್' ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಬದಲಾಗಿ ಭಾರತದ ರಾಜಕೀಯ, ಸಾಮಾಜಿಕ ಮತ್ತು ಕಾರ್ಯತಂತ್ರದ ಇಚ್ಛಾಶಕ್ತಿಯ ಸಂಕೇತವಾಗಿದೆʼ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಯುದ್ಧವನ್ನ ಇಲ್ಲಿಗೆ ನಿಲ್ಲಿಸಲ್ಲ; ಭಾರತಕ್ಕೆ ಸರಿಯಾದ ಸಮಯದಲ್ಲಿ ಉತ್ತರ ನೀಡುತ್ತೇವೆ: ಪಾಕಿಸ್ತಾನ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.