ಒಂದೂವರೆ ಲಕ್ಷದ ಗಡಿ ಸಮೀಪ ಬಂದ ಭಾರತದ COVID 19 ವೈರಸ್ ಪೀಡಿತರ ಸಂಖ್ಯೆ
ದೇಶಕ್ಕೆ ದೇಶವನ್ನೇ ದಿಗ್ಬಂಧನಗೊಳಿಸಿದರೂ COVID 19 ಎಂಬ ಕಂಡುಕೇಳರಿಯದ ಸೋಂಕು ಹರಡುವಿಕೆ ಕಮ್ಮಿ ಆಗಿಲ್ಲ.
ನವದೆಹಲಿ: ಲಾಕ್ಡೌನ್ ಜಾರಿಗೊಳಿಸಿದ್ದು ನಿರರ್ಥಕವಾಗಿದೆ. ಅಥವಾ ಸೂಕ್ತ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಮಾಡಿಲ್ಲವೆನಿಸುತ್ತಿದೆ. ಏಕೆಂದರೆ ದೇಶಕ್ಕೆ ದೇಶವನ್ನೇ ದಿಗ್ಬಂಧನಗೊಳಿಸಿದರೂ ಕರೋನವೈರಸ್ (Coronavirus) COVID 19 ಎಂಬ ಕಂಡುಕೇಳರಿಯದ ಸೋಂಕು ಹರಡುವಿಕೆ ಕಮ್ಮಿ ಆಗಿಲ್ಲ. ಇದರ ಪರಿಣಾಮವಾಗಿ ಪ್ರಪಂಚದಲ್ಲೇ ಅತಿಹೆಚ್ಚು ಕೊರೋನಾ ವೈರಸ್ ಪೀಡಿತರರಿರುವ ಮೊದಲ ಹತ್ತು ದೇಶಗಳ ಪೈಕಿ ಭಾರತ 10ನೇ ಸ್ಥಾನಕ್ಕೆ ಏರಿದೆ. ಅದೂ ಅಲ್ಲದೆ ಭಾರತದ COVID 19 ವೈರಸ್ ಪೀಡಿತರ ಸಂಖ್ಯೆ ಒಂದೂವರೆ ಲಕ್ಷದ ಗಡಿಯ ಸಮೀಪವೂ ಬಂದಿದೆ.
ಕಳೆದ ವಾರಾಂತ್ಯದಲ್ಲೇ ಹುಟ್ಟಿದ ದಿನವೊಂದರಲ್ಲಿ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುವ ಟ್ರೆಂಡ್ ಮತ್ತೂ ಮುಂದುವರೆದಿದೆ. ಭಾರತದಲ್ಲಿ ನಿನ್ನೆ ಒಂದೇ ದಿನ 6,535 ಜನರಿಗೆ ಕೋವಿಡ್ -19 (Covid-19) ಸೋಂಕು ಇರುವುದು ದೃಢಪಟ್ಟಿದೆ. ಇದರಿಂದ ಭಾರತದ COVID 19 ಸೋಂಕು ಪೀಡಿತರ ಸಂಖ್ಯೆ 1,45,380ಕ್ಕೆ ಏರಿಕೆಯಾಗಿದೆ. ಈ ಮುಖಾಂತರ ದೇಶದ COVID 19 ವೈರಸ್ ಪೀಡಿತರ ಸಂಖ್ಯೆ ಒಂದೂವರೆ ಲಕ್ಷದ ಗಡಿಯ ಸಮೀಪವೂ ಬಂದಿದೆ.
ಕೆಲವರು COVID 19 ವಿಷಯ ನಿಭಾಯಿಸಿರುವುದರಲ್ಲಿ ಭಾರತ ಬೇರೆ ದೇಶಗಳಿಗೆ ಹೋಲಿಸಿಕೊಂಡರೆ ಪರವಾಗಿಲ್ಲ ಎಂದು ಬೀಗುತ್ತಿದ್ದಾರೆ. ಆದರೆ ದೇಶದ ಪರಿಸ್ಥಿತಿ ಆಗಿಲ್ಲ ಎಂಬುದನ್ನು ಅಂಕಿಅಂಶಗಳು ಸಾರಿ ಸಾರಿ ಹೇಳುತ್ತವೆ.
ದಿನದಿಂದ ದಿನಕ್ಕೆ COVID 19 ವೈರಾಣು ಪೀಡಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಇತ್ತೀಚೆಗೆ 12ನೇ ಸ್ಥಾನದಲ್ಲಿದ್ದ ಚೀನಾವನ್ನು ಹಿಂದಿಕ್ಕಿ 11ನೇ ಸ್ಥಾನಕ್ಕೆ ಬಂದಿತ್ತು. ಮೊನ್ನೆಯಷ್ಟೇ ಭಾರತದ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದೂಕಾಲು ಲಕ್ಷ ದಾಟಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಟಾಪ್ ಟೆನ್ ಒಳಗೆ ಬಂದಿದೆ. ಮತ್ತೀಗ ಒಂದೂವರೆ ಲಕ್ಷದ ಗಡಿಯ ಬಳಿಯೂ ಬಂದಿದೆ.
ಇದಕ್ಕೂ ಮೊದಲು ಮೇ 6ರಿಂದ 3 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಾಣಿಸಿಕೊಂಡಿದ್ದವು. ಮೇ 10ರಿಂದ 4 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಮೇ17ರಿಂದ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾದವು. ಈಗ ಮೇ 21ರಿಂದ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸಿದ್ದವು.
ಪ್ರತಿದಿನ ಭಾರತದ ಕೇಂದ್ರ ಆರೋಗ್ಯ ಇಲಾಖೆ ಪ್ರಕಟಿಸುವ ಮಾಹಿತಿಗಳ ಪ್ರಕಾರ ಮೇ 6ರಿಂದ ಈವರೆಗಿನ ಚಿತ್ರಣ ಹೀಗಿದೆ...
ಮೇ 6ರಂದು 3,561,
ಮೇ 7ರಂದು 3,390,
ಮೇ 8ರಂದು 3,320,
ಮೇ 9ರಂದು 3,277,
ಮೇ 10ರಂದು 4,213,
ಮೇ 11ರಂದು 3,064,
ಮೇ 12ರಂದು 3,525,
ಮೇ 13ರಂದು 3,722,
ಮೇ 14ರಂದು 3,967,
ಮೇ 15ರಂದು 3,970,
ಮೇ 16ರಂದು 4,987,
ಮೇ 17ರಂದು 5,242,
ಮೇ 18ರಂದು 4,970,
ಮೇ 19ರಂದು 5,611,
ಮೇ 20ರಂದು 5,609,
ಮೇ 21ರಂದು 6,088,
ಮೇ 22ರಂದು 6,654,
ಮೇ 23ರಂದು 6,767,
ಮೇ 24ರಂದು 6,977,
ಮೇ25ರಂದು 6,535.
ಅಲ್ಲದೆ ನಿನ್ನೆ ಒಂದೇ ದಿನ ದೇಶದಲ್ಲಿ 146 ಜನ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಸತ್ತವರ ಸಂಖ್ಯೆ 4,167ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಈವರೆಗೆ ಗುಣಮುಖರಾದವರು 60,490 ಜನ ಮಾತ್ರ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.