ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಫ್ರೆಂಚ್​ನ ಅತ್ಯುನ್ನತ ಗೌರವ ಗ್ರ್ಯಾಂಡ್​ ಕ್ರಾಸ್​ ಆಫ್​ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜುಲೈ 13ರಂದು ಫ್ರಾನ್ಸ್ ನಲ್ಲಿ ರಿಪಬ್ಲಿಕ್​ ಡೇ ಆಚರಿಸಲಾಯಿತು ಆ ವೇಳೆ ಪ್ರಧಾನಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಭಾಗಿಯಾಗಿದ್ದರು.


COMMERCIAL BREAK
SCROLL TO CONTINUE READING

ಆ ಸಮಾರಂಭದಲ್ಲಿ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತದ ಪ್ರಧಾನಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ಮ್ಯಾಕ್ರನ್ ಹಾಗೂ ಭಾರತದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. 


ಇದನ್ನೂ ಓದಿ: ʼನಮಸ್ಕಾರ ದೇವ್ರುʼ Dr Bro ವಿಡಿಯೋ ಮಾಡಿದ್ದಕ್ಕೆ ಅಲ್ಲಿನ ಜನ ಏನ್‌ ಮಾಡಿದ್ರು ನೀವೆ ನೋಡಿ..!


ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ, ಕೂಡ ಮೋದಿಯನ್ನು ಶ್ಲಾಘಿಸಿದ್ದಾರೆ. ವಿದೇಶಗಳೊಡನೆ ಉತ್ತಮ ಭಾಂದವ್ಯ ಹೊಂದಲು ಈ ಪ್ರಶಸ್ತಿ ಕೂಡ ಸಹಕಾರ ಎಂದಿದ್ದಾರೆ. ಫ್ರಾನ್ಸ್ ಅಧ್ಯಕ್ಷರಿಂದ ಅತ್ಯುನ್ನತ ಪ್ರಶಸ್ತಿ ಭಾರತದ ಪ್ರಧಾನಿ ಕಾರಣರಾಗಿದ್ದಾರೆ ಎಂದು ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 


ಅರಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಅಲ್ಲಿನ ಅದ್ದೂರಿ ಔತಣಕೂಟದಲ್ಲಿ ಭಾಗಿಯಾಗಿದರು. ಇದೀಗ ಪ್ರಧಾನಿ ಮೋದಿ ಅವರು ಫ್ರಾನ್ಸ್​ನ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ಫ್ರೆಂಚ್​ನ ಅತ್ಯುನ್ನತ ಗೌರವ ಗ್ರ್ಯಾಂಡ್​ ಕ್ರಾಸ್​ ಆಫ್​ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿ  ಸ್ವೀಕಾರ ಮಾಡಿರುವುದು ಭಾರತಿಯರಿಗೆ ಸಂತಸದ ವಿಚಾರಗಳಲ್ಲಿ ಒಂದಾಗಿದೆ.  


ಇದನ್ನೂ ಓದಿ: ಟೊಮ್ಯಾಟೋ ಗೂ ಬಂತು ‘ಟಮ್ ಟಮ್ ಟ್ರೆಂಡಿಗ್ ಸಾಂಗ್‌;‌ ಇಲ್ಲಿದೆ ವಿಡಿಯೋ ..!https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.