ಪ್ರಯಾಣಿಕರೊಬ್ಬರಿಗೆ ಹೃದಯಾಘಾತ; ಮಾರ್ಗ ಬದಲಾಯಿಸಿದ ಇಂಡಿಗೋ ವಿಮಾನ!
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪುಣೆಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮಾರ್ಗ ಬದಲಾಯಿಸಿದೆ.
ನವದೆಹಲಿ: ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾದ ಕಾರಣ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪುಣೆಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮಾರ್ಗ ಬದಲಾಯಿಸಿದೆ.
ಎಎನ್ಐ ಸುದ್ದಿ ಸಂಸ್ಥೆ ವರದಿ ಪ್ರಕಾರ, ವಿಮಾನವು ಮದ್ಯಪ್ರದೇಶದ ಇಂಧೋರ್'ಗೆ ಮಾರ್ಗ ಬದಲಾಯಿಸಿದೆ. ಸದ್ಯ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ಇಂಧೋರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.