ಇಂದಿರಾ ಗಾಂಧಿಗೆ 'ಪ್ರಿಯದರ್ಶಿನಿ' ಎಂದು ನಾಮಕರಣ ಮಾಡಿದವರು ಯಾರು?

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 101 ನೇ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.  

Last Updated : Nov 19, 2018, 11:53 AM IST
ಇಂದಿರಾ ಗಾಂಧಿಗೆ 'ಪ್ರಿಯದರ್ಶಿನಿ' ಎಂದು ನಾಮಕರಣ ಮಾಡಿದವರು ಯಾರು? title=
File Photo

ನವದೆಹಲಿ: ದೇಶದ ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 101 ನೇ ಜನ್ಮ ದಿನಾಚರಣೆ ಇಂದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೋಮವಾರ ದೆಹಲಿಯ ಶಕ್ತಿ ಸ್ಥಳದಲ್ಲಿ ಗೌರವ ಸಲ್ಲಿಸಿದ್ದಾರೆ. ಇದರೊಂದಿಗೆ, ಪ್ರಧಾನಿ ಮೋದಿ ಕೂಡ ಇಂದಿರಾ ಗಾಂಧಿ ಅವರಿಗೆ ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಇಂದು ಬೆಳಿಗ್ಗೆ ಶಕ್ತಿ ಸ್ಥಳವನ್ನು ತಲುಪಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 101 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಗೌರವ ಸಲ್ಲಿಸಿದರು. 

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೋಮವಾರ ಇಂದಿರಾ ಗಾಂಧಿಯವರಿಗೆ ಗೌರವಾರ್ಪಣೆ ಸಲ್ಲಿಸಿದರು.

ಸ್ವತಂತ್ರ ಭಾರತದ ಇತಿಹಾಸದಲ್ಲಿ, ಪ್ರಪಂಚದಾದ್ಯಂತ ಅವರ ಅಳಿಸಲಾಗದ ಪ್ರಭಾವ ಬೀರಿದ ಕೆಲವೇ ಜನರು ತಮ್ಮ ವ್ಯಕ್ತಿತ್ವದ ಉದಾಹರಣೆಗಳನ್ನು ನೀಡಿದ್ದಾರೆ. ಇಂದಿರಾ 'ಪ್ರಿಯದರ್ಶಿನಿ' ಗಾಂಧಿಯವರ ಹೆಸರನ್ನು 'ಐರನ್ ಲೇಡಿ'(ಉಕ್ಕಿನ ಮಹಿಳೆ) ಎಂದು  ಕೂಡಾ ಕರೆಯಲಾಗುತ್ತದೆ.

ಇಂದಿರಾ ಗಾಂಧಿಗೆ 'ಪ್ರಿಯದರ್ಶಿನಿ' ಎಂದು ನಾಮಕರಣ ಮಾಡಿದವರು?
ಜವಾಹರಲಾಲ್ ನೆಹರು ಮತ್ತು ಕಮಲಾ ನೆಹರು ಅವರ ಸುಂದರ ಮಗಳು (ಇಂದಿರಾ ಗಾಂಧಿಯವರು) ನವೆಂಬರ್ 19, 1917 ರಂದು ಜನಿಸಿದರು. ಅವರ ಅಜ್ಜ ಮೊತಿಲಾಲ್ ನೆಹರೂ ಅವರು ಇಂದಿರಾ ಎಂದು ಹೆಸರಿಸಿದರು. ರವೀಂದ್ರನಾಥ ಟ್ಯಾಗೋರ್ ಇಂದಿರಾರನ್ನು 'ಪ್ರಿಯದರ್ಶಿನಿ' ಎಂದು ಕರೆದರು. ತಮ್ಮ ಶಾಲಾ ಶಿಕ್ಷಣ ಮುಗಿಸಿ ಶಾಂತಿನಿಕೇತನಕ್ಕೆ ದಾಖಲಾದಾಗ ನೋಡಲು ಆಪ್ತ ಎನಿಸುವಂತಿದ್ದ ಅವರ ಮೊಗವನ್ನು ಕಂಡು ಅವರಿಗೆ 'ಪ್ರಿಯದರ್ಶಿನಿ' ಎಂಬ ಹೆಸರಿಟ್ಟರು. 

ಇಂಡಿಯಾ ಎಂದರೆ ಇಂದಿರಾ:
ಇಂಡಿಯಾ ಎಂದರೆ ಇಂದಿರಾ ಎನ್ನುವಷ್ಟರ ಮಟ್ಟಿಗೆ 70-80 ರ ದಶಕದಲ್ಲಿ ಖ್ಯಾತಿಯನ್ನು ಹೊಂದಿದ್ದರು. ಅಷ್ಟರ ಮಟ್ಟಿಗೆ ಇಂದಿರಾಗಾಂಧಿ ಸ್ವಾತಂತ್ರೋತ್ತರ ರಾಜಕೀಯದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದರು. ಅಪ್ಪ ನೆಹರು ನಂತರ ನಿಜ ಅರ್ಥದಲ್ಲಿ ಆಧುನಿಕ ಭಾರತದ ಸಾರಥಿಯಾಗಿದ್ದರು. ಆ ಕಾಲಘಟ್ಟದಲ್ಲಿ ಒಂದು ಕಡೆ ಪುರುಷರಿಂದಲೇ ತುಂಬಿ ಹೋಗಿದ್ದ ಕಾಂಗ್ರೆಸ್ ಪಕ್ಷವನ್ನು ಮತ್ತು ಸರ್ಕಾರವನ್ನು ತಾವೊಬ್ಬರೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದ ರೀತಿ ನಿಜಕ್ಕೂ ಅಚ್ಚರಿ ಮೂಡಿಸುವಂತದ್ದು.

1964 ಮೇ 27ರಂದು ನೆಹರು ನಿಧನರಾದರು. ನೂತನ ಪ್ರಧಾನ ಮಂತ್ರಿಯಾಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಒತ್ತಾಯಕ್ಕೆ ಮಣಿದ ಇಂದಿರಾ ಚುನಾವಣೆಯಲ್ಲಿ ಸ್ಫರ್ಧಿಸಿ, ಸರ್ಕಾರವನ್ನು ಸೇರಿದರು. ವಾರ್ತಾ ಮತ್ತು ಪ್ರಸಾರ ಖಾತೆ ಮಂತ್ರಿಯಾಗಿ ಅವರು ನೇಮಕಗೊಂಡರು. ಹಿಂದಿಯನ್ನು ರಾಷ್ಟ್ರಭಾಷೆ ಎಂದು ಘೋಷಿಸಿದ್ದರ ಪರಿಣಾಮವಾಗಿ ತಮಿಳುನಾಡಿನಲ್ಲಿ ದೊಂಬಿಯೆದ್ದಿತು. ಹಿಂದಿ ಮಾತನಾಡದ ತಮಿಳುನಾಡು ರಾಜ್ಯದ ರಾಜಧಾನಿ ಮದ್ರಾಸ್‌ಗೆ ಆ ಸಂದರ್ಭದಲ್ಲಿ ಅವರು ಭೇಟಿ ನೀಡಿದ್ದರು.ಅಲ್ಲಿ ಅವರು ಸರಕಾರಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮುದಾಯ ಮುಖಂಡರ ಕೋಪವನ್ನು ಶಮನಗೊಳಿಸಿದರು. 

ಗಲಭೆಯಿಂದಾಗಿ ಹಾನಿಗೀಡಾದ ಪ್ರದೇಶಗಳ ಮರು-ನಿರ್ಮಾಣದ ಮೇಲ್ವಿಚಾರಣೆ ವಹಿಸಿದರು. ಇಂಥ ಉಪಕ್ರಮಕ್ಕೆ ಹೆಜ್ಜೆ ಇಡದ ಶಾಸ್ತ್ರಿ ಮತ್ತು ಅವರ ಸಂಪುಟದ ಹಿರಿಯ ಸಚಿವರು ಮುಜುಗರಕ್ಕೆ ಒಳಗಾದರು. ಗಾಂಧಿಯವರ ಈ ಕ್ರಿಯಾಶೀಲತೆ ಬಹುಶಃ ನೇರವಾಗಿ ಶಾಸ್ತ್ರಿಯವರಿಗೇ ಗುರಿ ಇಟ್ಟಿದ್ದಾಗಲೀ ಅಥವಾ ತಮ್ಮ ಸ್ವಂತ ರಾಜಕೀಯ ಉನ್ನತಿಯನ್ನು ಬಯಸಿದ್ದಾಗಲೀ ಆಗಿರಲಿಲ್ಲ. ತಮ್ಮ ಸಚಿವಾಲಯದ ನಿತ್ಯದ ಕೆಲಸ-ಕಾರ್ಯಗಳಲ್ಲಿ ಅವರು ಆಸಕ್ತಿ ಕಳೆದುಕೊಂಡರು ಎಂಬ ವರದಿಗಳೂ ಇವೆ. ಮಾಧ್ಯಮದ ಅರಿವಿದ್ದ ಅವರು ರಾಜಕಾರಣದ ಕಲೆ ಮತ್ತು ವ್ಯಕ್ತಿತ್ವ-ರೂಪಿಸುವ ನೈಪುಣ್ಯ ಹೊಂದಿದ್ದರು.

1965ರ ಭಾರತ-ಪಾಕಿಸ್ಥಾನ ಯುದ್ಧ ನಡೆಯುತ್ತಿದ್ದಾಗ, ಗಾಂಧಿ ಶ್ರೀನಗರದ ಗಡಿ ಪ್ರದೇಶದಲ್ಲಿ ವಿಹಾರ ನಡೆಸಿದ್ದರು. ಪಾಕಿಸ್ಥಾನಿ ದಂಗೆಕೋರರು ನಗರದ ಹತ್ತಿರಕ್ಕೆ ನುಸುಳಿ ಬಂದಿದ್ದಾರೆ ಎಂದು ಸೇನೆಯು ಎಚ್ಚರಿಕೆ ನೀಡಿದರೂ ಸಹ, ಅದನ್ನು ಲೆಕ್ಕಿಸದ ಅವರು ಜಮ್ಮು ಅಥವಾ ದೆಹಲಿಗೆ ವಾಸ್ತವ್ಯ ಸ್ಥಳಾಂತರಿಸಲು ನಿರಾಕರಿಸಿದರು. ಬದಲಿಗೆ ಸ್ಥಳೀಯ ಆಡಳಿತ ಯಂತ್ರವನ್ನು ಪುನಶ್ಚೇತನಗೊಳಿಸುತ್ತಾ ಮಾಧ್ಯಮದ ಗಮನವನ್ನು ತಮ್ಮತ್ತ ಸೆಳೆದರು. ಪಾಕಿಸ್ಥಾನದ ದಾಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಲಾಯಿತು, ಮತ್ತು ಪ್ರಧಾನ ಮಂತ್ರಿ ಶಾಸ್ತ್ರಿಯವರು 1966 ಜನವರಿಯಲ್ಲಿ ಪಾಕಿಸ್ಥಾನದ ಆಯೂಬ್ ಖಾನ್‌ರೊಂದಿಗೆ ತಾಷ್ಕೆಂಟ್‌ನಲ್ಲಿ, ಸೋವಿಯತ್ ಸಮ್ಮುಖದಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದರು. ಇದಾದ ಕೆಲವೇ ಗಂಟೆಗಳ ನಂತರ, ಶಾಸ್ತ್ರಿ ಹೃದಯಾಘಾತಕ್ಕೀಡಾಗಿ ನಿಧನರಾದರು. 

ಮೊರಾರ್ಜಿ ದೇಸಾಯಿಯವರ ವಿರೋಧದ ನಡುವೆಯೂ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಕೆ. ಕಾಮರಾಜ್‌ ಅವರು ಇಂದಿರಾ ಗಾಂಧಿಯನ್ನು ಪ್ರಧಾನ ಮಂತ್ರಿ ಗದ್ದುಗೆಗೆ ಏರಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದಲ್ಲಿ ನಡೆದ ಚುನಾವಣೆಯಲ್ಲಿ ಇಂದಿರಾ ಜಯಶೀಲರಾದರು. ಮೊರಾರ್ಜಿ ದೇಸಾಯಿಯವರ 169 ಮತಕ್ಕೆ ಎದುರಾಗಿ ಇವರು 355 ಮತಗಳನ್ನು ಪಡೆಯುವ ಮೂಲಕ ಭಾರತದ ಐದನೇ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಭಾರತದ ಮೊದಲ ಮಹಿಳಾ ಪ್ರಧಾನಿ ಎಂಬ ಕೀರ್ತಿಗೆ ಭಾಜನ ರಾದರು.

ಪ್ರಾರಂಭದ ದಿನಗಳಲ್ಲಿ ಅಂದರೆ ಲಾಲ್ ಬಹುದೂರ್ ಶಾಸ್ತ್ರಿ ಸಂಪುಟದಲ್ಲಿ ವಾರ್ತಾ ಮಂತ್ರಿಯಾಗಿದ್ದ ಇಂದಿರಾ ಅದರ ನಿರ್ವಹಣೆಯ ವೈಫಲ್ಯದಿಂದ ಅವರನ್ನು ರಾಮ್ ಮನೋಹರ ಲೋಹಿಯರಂತಹ ರಾಜಕಾರಣಿಗಳಿಂದ 'ಗೂಂಗಿ ಗುಡಿಯಾ' ಅಂತಲೂ ಕರೆದಿದ್ದಿದೆ. ಆದರೆ ಕಾಲಾಂತರದಲ್ಲಿ ಇಂತಹ ಟೀಕೆಗಳನ್ನು ಇಂದಿರಾ ತಮ್ಮ ಆಡಳಿತ ಶೈಲಿಯಿಂದಲೇ ಅಂತಹವರನ್ನು ಬಾಯಿ ಮುಚ್ಚಿಸಿದ್ದರು ಎನ್ನುವುದು ಈಗ ಇತಿಹಾಸ. 

Trending News