ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ, ಗಡಿಗಳಲ್ಲೂ ಹಾರಾಡಿದ ತಿವರ್ಣ ಧ್ವಜ

ದೇಶದಾದ್ಯಂತ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗಿದೆ.

Written by - Zee Kannada News Desk | Last Updated : Aug 15, 2021, 12:06 PM IST
  • ಜಮ್ಮು-ಕಾಶ್ಮೀರ, ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸೇರಿ ದೇಶದಾದ್ಯಂತ ಸ್ವಾತಂತ್ರ್ಯೋತ್ಸವದ ಸಂಭ್ರಮ
  • ದೇಶದ ವಿವಿಧ ಗಡಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿದ ವೀರ ಸೈನಿಕರಿಂದ ಸ್ವಾತಂತ್ರ್ಯೋತ್ಸವದ ಆಚರಣೆ
  • ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಾರರಿಗೆ ನಮನ ಸಲ್ಲಿಸಿದ ದೇಶದ ಜನತೆ
ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ, ಗಡಿಗಳಲ್ಲೂ ಹಾರಾಡಿದ ತಿವರ್ಣ ಧ್ವಜ title=
ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ (Photo Courtesy: ANI)

ನವದೆಹಲಿ: ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವ(75th Independence Day)ದ ಸಂಭ್ರಮ ಮನೆಮಾಡಿದೆ. ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸಲಾಗುತ್ತಿದೆ. ವಿವಿಧ ರಾಜ್ಯಗಳಲ್ಲಿ, ದೇಶದ ಗಡಿಗಳಲ್ಲಿ ಸ್ವಾತಂತ್ರ್ಯದ ಸಂಭ್ರಮಾಚರಣೆ ನಡೆಯುತ್ತಿದೆ.

ರಾಷ್ಟ್ರ ರಾಜಧಾನಿ ದೆಹಲಿ, ಮಹಾರಾಷ್ಟ್ರ, ಕೋಲ್ಕತ್ತಾ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಸೇರಿದಂತೆ ದೇಶದಾದ್ಯಂತ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗಿದೆ. ದೇಶದ ಜನರು ಆಗಸ್ಟ್ 15(15th August)ರ ಮಹತ್ವದ ದಿನದಂದು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಾರರಿಗೆ ನಮನ ಸಲ್ಲಿಸಿದ್ದಾರೆ. ದೇಶದದ ವಿವಿಧ ಗಡಿಗಳಲ್ಲಿ ವೀರ ಸೈನಿಕರು ಸ್ವಾತಂತ್ರ್ಯೋತ್ಸವ ಆಚರಿಸುವ ಮೂಲಕ ತ್ರಿವರ್ಣ ಧ್ವಜಕ್ಕೆ ಸಲಾಂ ಎಂದಿದ್ದಾರೆ.

ಸ್ವಾತಂತ್ರ್ಯೋತ್ಸವ ಸಂಭ್ರಮದ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರ(Jammu and Kashmir) ಸೇರಿದಂತೆ ದೇಶದ ವಿವಿಧ ನಗರಗಳಲ್ಲಿರುವ ಪಾರಂಪರಿಕ ಕಟ್ಟಡಗಳು, ಬ್ರಿಡ್ಜ್ ಗಳನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ಯೋಧರು ಲಡಾಖ್‌ನ ಪಾಂಗಾಂಗ್ ತ್ಸೊ ದಡದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿ ಸಂಭ್ರಮಿಸಿದ್ದಾರೆ.    

ಭಾರತೀಯ ಸೇನಾಪಡೆ ಯೋಧರು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌(Nowshera Sector)ನಲ್ಲಿ ಸ್ಥಳೀಯರೊಂದಿಗೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ 75ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News