International Flights Resumed: ಎರಡು ವರ್ಷಗಳ ನಂತರ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರದ ಅನುಮತಿ, ಈ ದಿನದಿಂದ ಸೇವೆ ಆರಂಭ
International Flights Resumed - ಮಾರ್ಚ್ 27, 2022 ರಿಂದ ಮತ್ತೊಮ್ಮೆ ದೇಶದಲ್ಲಿ ನಿಯಮಿತವಾಗಿ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಸೇವೆ ಆರಂಭಗೊಳ್ಳಲಿದೆ.
International Flights Resumed - ಮಾರ್ಚ್ 27, 2022 ರಿಂದ ಮತ್ತೊಮ್ಮೆ ನಿಯಮಿತವಾಗಿ ನಿಗದಿತ ವಾಣಿಜ್ಯ ಅಂತರರಾಷ್ಟ್ರೀಯ ಪ್ರಯಾಣಿಕರ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ, ಇದರ ಅಡಿಯಲ್ಲಿ ವಿಮಾನಗಳು ದೇಶದಿಂದ ಹೊರಗೆ ಹೋಗಲು ಸಾಧ್ಯವಾಗಲಿದೆ ಮತ್ತು ಹೊರಗಿನ ವಿಮಾನಗಳು ಸಹ ದೇಶಕ್ಕೆ ಬರಲು ಸಾಧ್ಯವಾಗಲಿದೆ. ಕರೋನಾನಿಂದಾಗಿ (Coronavirus) ಸುಮಾರು ಎರಡು ವರ್ಷಗಳ ಹಿಂದೆ, ಕೇಂದ್ರ ಸರ್ಕಾರವು ನಿಗದಿತ ಅಂತರಾಷ್ಟ್ರೀಯ ವಿಮಾನಯಾನ ಸೇವೆಯನ್ನು ನಿರ್ಬಂಧಿಸಿತ್ತು. ಆದರೆ, ಇದೀಗ ಮತ್ತೆ ವಿಮಾನ ಹಾರಾಟವನ್ನು ಮರುಸ್ಥಾಪಿಸಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Civil Aviation Ministery) ಮಾಹಿತಿ ನೀಡಿದೆ.
ಆದಾಗ್ಯೂ, ಅಂತರಾಷ್ಟ್ರೀಯ ವಿಮಾನಗಳ ಹಾರಾಟದ ಅವಧಿಯಲ್ಲಿ ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ಕೇಂದ್ರ ತನ್ನ ನಿರ್ಧಾರದಲ್ಲಿ ತಿಳಿಸಿದೆ.
Smartphone-Internet ಇಲ್ಲದೆಯೇ UPI Payment ಮಾಡಿ, ಜಬರ್ದಸ್ತ್ ಸೇವೆ ಆರಂಭಿಸಿದ RBI
ಈ ಕುರಿತು ಟ್ವೀಟ್ ಮಾಡಿರುವ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia), "ಸ್ಟೆಕ್ ಹೋಲ್ಡರ್ಸ್ ಗಳ ಜೊತೆಗೆ ಸಮಾಲೋಚನೆ ನಡೆಸಿದ ನಂತರ ಮತ್ತು ಕರೋನಾ (Covid-19) ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆ, ನಾವು ಮಾರ್ಚ್ 27 ರಿಂದ ಅಂತರಾಷ್ಟ್ರೀಯ ನಾಗರಿಕ ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ನಿರ್ಧರಿಸಿದ್ದೇವೆ. ಇದರ ನಂತರ ಬಯೋ ಬಬಲ್ (Bio Bubble) ವ್ಯವಸ್ಥೆಯು ಕೂಡ ಕೊನೆಗೊಳ್ಳಲಿದೆ. ಸರ್ಕಾರದ ಈ ನಿರ್ಧಾರದಿಂದ ಕ್ಷೇತ್ರ ಹೊಸ ಎತ್ತರಕ್ಕೆ ತಲುಪುವ ಭರವಸೆ ನಮಗಿದೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ-ಉಕ್ರೇನ್-ರಷ್ಯಾ ಯುದ್ಧದಿಂದ ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ನಿರ್ಮಲಾ ಸೀತಾರಾಮನ್
ಕರೋನವೈರಸ್ ಹರಡುವುದನ್ನು ತಡೆಯಲು 23 ಮಾರ್ಚ್ 2020 ರಂದು ನಾಗರಿಕ ವಿಮಾನಯಾನ ಸಚಿವಾಲಯವು ನಿಗದಿತ ವಾಣಿಜ್ಯ ಅಂತರರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ನಿಷೇಧಿಸಿತ್ತು ಎಂಬುದು ಇಲ್ಲಿ ಗಮನಾರ್ಹ. ಇದಕ್ಕೂ ಮೊದಲು ಫೆಬ್ರವರಿ 28 ರಂದು, DGCA ಮುಂದಿನ ಆದೇಶದವರೆಗೆ ವಾಣಿಜ್ಯ ಅಂತರರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಿತ್ತು.
ಇದನ್ನೂ ಓದಿ-ಅಧಿಕಾರದುದ್ದಕ್ಕೂ ನಿದ್ದೆ ಮಾಡ್ತಾ ರಾಜ್ಯವನ್ನೇ ಸಾಲದ ಶೂಲಕ್ಕೇರಿಸಿದ ‘ಸಾಲರಾಮಯ್ಯ’: ಬಿಜೆಪಿ ಟೀಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.