/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಅಂತರಾಷ್ಟ್ರೀಯ ಯೋಗ ದಿನ 2022: ಪ್ರತಿ ವರ್ಷ ಜೂನ್ 21 ರಂದು ಯೋಗ ದಿನಾಚರಣೆ ಅನ್ನು ಆಚರಿಸಲಾಗುತ್ತದೆ. ಇಂದು (ಜೂನ್ 21) ದೇಶ ಮತ್ತು ವಿಶ್ವದಲ್ಲಿ ಎಂಟನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ .  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಜೂನ್ 21)  ಸಾಂಸ್ಕೃತಿಕ ನಗರಿ ಮೈಸೂರು ಅರಮನೆಯಲ್ಲಿ ಯೋಗ ಮಾಡುವ ಮೂಲಕ 8 ನೇ ಯೋಗ ದಿನಾಚರಣೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ಅರಮನೆ ಮೈದಾನದಲ್ಲಿ ಪ್ರಧಾನಿಯವರೊಂದಿಗೆ 15 ಸಾವಿರಕ್ಕೂ ಹೆಚ್ಚು ಮಂದಿ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವರ್ಷ ಯೋಗದಿನಾಚರಣೆಯ ಥೀಮ್ ಅನ್ನು "ಮಾನವೀಯತೆಗಾಗಿ ಯೋಗ" ಎಂದು ಹೆಸರಿಸಲಾಗಿದೆ.

ಯೋಗ ದಿನದ ಕಾರ್ಯಕ್ರಮ ಬೆಳಗ್ಗೆ 6.30ಕ್ಕೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 7ರಿಂದ 7:45ರವರೆಗೆ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂದು ನಿಮಿಷದ ಪ್ರಾರ್ಥನೆಯೊಂದಿಗೆ ಯೋಗ ದಿನ ಆರಂಭವಾಗಲಿದೆ. ಇದರ ನಂತರ ನಾಲ್ಕು ನಿಮಿಷಗಳ ಕಾಲ ಸ್ಟ್ರೆಚಿಂಗ್ ಇರುತ್ತದೆ ಮತ್ತು ನಂತರ ಸುಮಾರು 20 ಆಸನಗಳನ್ನು ಮಾಡಲಾಗುತ್ತದೆ.

ಸ್ವರ್ಣ ಲೇಪಿತ ಅಕ್ಷರದ ಫೋಟೋ:
ಮೈಸೂರಿನ ಅರಮನೆ ಮೈದಾನದಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸ್ವರ್ಣಾಕ್ಷರಗಳಲ್ಲಿ ಕೆತ್ತನೆ ಮಾಡಿರುವ ವಿಶೇಷ ಉಡುಗೊರೆ ನೀಡಲು ಆಭರಣ ವ್ಯಾಪಾರಿಗಳು ಮುಂದೆ ಬಂದಿದ್ದಾರೆ. ಸ್ವರ್ಣ ಲೇಪಿತ ಅಕ್ಷರದ ಫೋಟೋ ಮೈಸೂರು ಅರಮನೆ, ಮೋದಿ ಯೋಗದ ಭಂಗಿ ಹಾಗೂ ಪ್ರಧಾನಿ ಭಾವಚಿತ್ರವನ್ನು ಬಂಗಾರದಿಂದ ಕೆತ್ತನೆ ಮಾಡಲಾಗಿದೆ. ಬಂಗಾರ ಲೇಪಿತ ಕೆತ್ತನೆಯ ಚಿತ್ರಪಟದಲ್ಲಿ ಯೋಗದ ಶ್ಲೋಕವನ್ನ ಅಳವಡಿಕೆ ಮಾಡಲಾಗಿದೆ. ಥಾಯ್ಲೆಂಡ್​​​ನಲ್ಲಿ ಮಾಡಿಸಲಾಗಿರುವ ವಿಶೇಷ ಗಿಫ್ಟ್​ ಇದಾಗಿದ್ದು, ಮೈಸೂರಿಗರ ಪರವಾಗಿ ಯೋಗಕ್ಕೆ ಮೈಸೂರನ್ನ ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಚಿನ್ನದ ಅಕ್ಷರಗಳಲ್ಲಿ ಕೃತಜ್ಞತೆ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ- ಅಂತಾರಾಷ್ಟ್ರೀಯ ಯೋಗ ದಿನ 2022: ಗ್ರಹಗಳ ಮೆಚ್ಚಿಸಲು ಈ ರೀತಿ ಯೋಗ ಮಾಡಿ

ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಗುರುತಿಸಲು, ಆಯುಷ್ ಸಚಿವಾಲಯವು ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಕೇಂದ್ರ ಮಂತ್ರಿಗಳಿಗೆ 75 ಸ್ಥಳಗಳನ್ನು ಗುರುತಿಸಿದೆ. ಈ ಯೋಗ ದಿನದಂದು ದೇಶದ ವಿವಿಧ ಸ್ಥಳಗಳಲ್ಲಿ ಯೋಗ ದಿನದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರಲ್ಲದೆ, ಎಲ್ಲಾ ಕೇಂದ್ರ ಸಚಿವರು ಮತ್ತು ಎಲ್ಲಾ ಬಿಜೆಪಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

ಅಂತರರಾಷ್ಟ್ರೀಯ ಯೋಗ ದಿನದ ಕಲ್ಪನೆ:
ಸೆಪ್ಟೆಂಬರ್ 27, 2014 ರಲ್ಲಿ ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಮಾಡಿದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಯೋಗ ದಿನದ ಕಲ್ಪನೆಯನ್ನು ಮೊದಲ ಬಾರಿಗೆ ತಂದರು. ಭಾರತವು ಅಂಗೀಕರಿಸಿದ ಕರಡು ನಿರ್ಣಯವನ್ನು 177 ರಾಷ್ಟ್ರಗಳು ಬೆಂಬಲಿಸಿದವು. ಯೋಗದ ಸಾರ್ವತ್ರಿಕ ಮನ್ನಣೆ ಮತ್ತು ಹೆಚ್ಚುತ್ತಿರುವ ಜನಪ್ರಿಯತೆಯೊಂದಿಗೆ, ವಿಶ್ವಸಂಸ್ಥೆಯು ಡಿಸೆಂಬರ್ 11, 2014 ರಂದು ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತು. ಬಳಿಕ ಜೂನ್ 21, 2015 ರಂದು ಮೊದಲ ಬಾರಿಗೆ  ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಇದನ್ನೂ ಓದಿ- Yoga For Weight Loss: ತೂಕ ಕಡಿಮೆ ಮಾಡಲು ಸಹಾಯಕವಾಗುವ 5 ಉತ್ತಮ ಯೋಗಾಸನಗಳಿವು

ಜೂನ್ 21 ರಂದು ಯೋಗ ದಿನವನ್ನು ಏಕೆ ಆಚರಿಸಲಾಗುತ್ತದೆ?
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶ್ವಸಂಸ್ಥೆಯ ಭಾಷಣದಲ್ಲಿ ಯೋಗ ದಿನ ಆಚರಣೆಗೆ ಜೂನ್ 21 ರ ದಿನಾಂಕವನ್ನು ನಿರ್ದಿಷ್ಟವಾಗಿ ಸೂಚಿಸಿದ್ದಾರೆ. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
International Yoga Day 2022: PM Narendra Modi arrives at Mysuru Palace Ground
News Source: 
Home Title: 

International Yoga Day 2022: ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗ!

International Yoga Day 2022: ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗ!
Caption: 
International Yoga Day 2022
Yes
Is Blog?: 
No
Tags: 
Facebook Instant Article: 
Yes
Highlights: 

ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ.

ಇಂದು (ಜೂನ್ 21) ದೇಶ ಮತ್ತು ವಿಶ್ವದಲ್ಲಿ ಎಂಟನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ .  

ಈ ವರ್ಷ ಯೋಗದಿನಾಚರಣೆಯ ಥೀಮ್ ಅನ್ನು "ಮಾನವೀಯತೆಗಾಗಿ ಯೋಗ" ಎಂದು ಹೆಸರಿಸಲಾಗಿದೆ.

Mobile Title: 
International Yoga Day 2022: ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗ!
Yashaswini V
Publish Later: 
No
Publish At: 
Tuesday, June 21, 2022 - 06:51
Created By: 
Yashaswini V
Updated By: 
Yashaswini V
Published By: 
Yashaswini V
Request Count: 
1
Is Breaking News: 
No