ಲಖನೌ: ಒಂದೆರಡು ವಾರದ ಸಂಸತ್ ನಲ್ಲಿ ಅನುಮೋದನೆಗೊಂಡಿರುವ ಪೌರತ್ವ (ತಿದ್ದುಪಡಿ) ಕಾಯ್ದೆ(Citizenship Amendment Act)ಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಹಲವಾರು ನಗರಗಳಲ್ಲಿ ಡಿಸೆಂಬರ್ 25 ರವರೆಗೆ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಲಖನೌ ಜಿಲ್ಲಾಧಿಕಾರಿ ಅಭಿಷೇಕ್ ಪ್ರಕಾಶ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಡಿಸೆಂಬರ್ 2014 ಅಥವಾ ಅದಕ್ಕಿಂತ ಮೊದಲು ಧಾರ್ಮಿಕ ಕಿರುಕುಳದಿಂದಾಗಿ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಪಲಾಯನಗೈದ ಹಿಂದೂಗಳು, ಸಿಖ್ಖರು, ಜೈನರು, ಪಾರ್ಸಿಗಳು, ಬೌದ್ಧರು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಉತ್ತರ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದೆ.


ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸಿಆರ್‌ಪಿಸಿ ಸೆಕ್ಷನ್ -144 ರ ಅಡಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿಯೂ ನಿರ್ಬಂಧ ಹೇರಲಾಗಿದೆ.