close

News WrapGet Handpicked Stories from our editors directly to your mailbox

INX ಮೀಡಿಯಾ ಪ್ರಕರಣ; ಚಿದಂಬರಂ ವಿಚಾರಣೆ ನಡೆಸಲು EDಗೆ ಅನುಮತಿ ನೀಡಿದ ಸಿಬಿಐ ಕೋರ್ಟ್

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಸಿಬಿಐ ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ ಮಂಗಳವಾರ ಅನುಮತಿ ನೀಡಿದೆ.

Updated: Oct 15, 2019 , 05:07 PM IST
INX ಮೀಡಿಯಾ ಪ್ರಕರಣ; ಚಿದಂಬರಂ ವಿಚಾರಣೆ ನಡೆಸಲು EDಗೆ ಅನುಮತಿ ನೀಡಿದ ಸಿಬಿಐ ಕೋರ್ಟ್

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಸಿಬಿಐ ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ ಮಂಗಳವಾರ ಅನುಮತಿ ನೀಡಿದೆ.

ಚಿದಂಬರಂ ಅವರನ್ನು ಅಕ್ಟೋಬರ್ 16 ರಂದು (ಬುಧವಾರ) ವಿಚಾರಣೆ ನಡೆಸಲಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಗತ್ಯವೆನಿಸಿದರೆ ಅವರನ್ನು ಬಂಧಿಸುವ ಸಾಧ್ಯತೆಯಿದೆ. ಒಂದು ವೇಳೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿದಂಬರಂ ಅವರನ್ನು ಬಂಧಿಸಿದರೆ ಅಕ್ಟೋಬರ್ 17(ಗುರುವಾರ) ಅವರನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. 

74 ವರ್ಷದ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸೆಪ್ಟೆಂಬರ್ 5 ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಇಡಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ಔಪಚಾರಿಕವಾಗಿ ಬಂಧಿಸಿ ಅವರನ್ನು ಕಸ್ಟಡಿ ಪಡೆಯಲು ಜಾರಿ ನಿರ್ದೇಶನಾಲಯ ಸೋಮವಾರ (ಅಕ್ಟೋಬರ್ 14) ಎರಡು ಮನವಿಗಳನ್ನು ಸಲ್ಲಿಸಿತ್ತು.

ಇಂದ್ರಾನಿ ಅವರ ಪುತ್ರಿ ಶೀನಾ ಬೋರಾ ಹತ್ಯೆಗೆ ಸಂಬಂಧಿಸಿದಂತೆ ಪ್ರಸ್ತುತ ಮುಂಬೈ ಜೈಲಿನಲ್ಲಿರುವ ಪೀಟರ್ ಮತ್ತು ಇಂದ್ರಾಣಿ ಮುಖರ್ಜಿ ಅವರು ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಅವರನ್ನು ಹೆಸರಿಸಿದ್ದಾರೆ. ಇಡಿ 2017 ರಲ್ಲಿ ಚಿದಂಬರಂ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನೂ ದಾಖಲಿಸಿತ್ತು.