ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಆಗಸ್ಟ್ 26 ರವರೆಗೆ ನಾಲ್ಕು ದಿನಗಳ ಕಸ್ಟಡಿಗೆ ತೆಗೆದುಕೊಂಡಿದೆ.


COMMERCIAL BREAK
SCROLL TO CONTINUE READING

ಗುರುವಾರದಂದು ಚಿದಂಬರಂ ಅವರನ್ನು ರಾಷ್ಟ್ರ ರಾಜಧಾನಿಯ ಸಿಬಿಐ ನ್ಯಾಯಾಲಯದಲ್ಲಿ ಹಾಜರುಪಡಿಸಿ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಚಿದಂಬರಂ ಅವರನ್ನು ಪ್ರತಿ 48 ಗಂಟೆಗಳಿಗೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಅಲ್ಲದೆ, ಅವರ ಬಂಧನದ ಸಮಯದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ವಕೀಲರು ಅವರನ್ನು ಭೇಟಿ ಮಾಡಲು ಅನುಮತಿ ನೀಡಿದೆ.


ಇದಕ್ಕೂ ಮೊದಲು ತನಿಖೆಗೆ ಚಿದಂಬರಂ ಅವರು ಸಹಕರಿಸುತ್ತಿಲ್ಲ ಎಂದು ಸಿಬಿಐ ಐದು ದಿನಗಳ ಕಸ್ಟಡಿಯನ್ನು ಕೇಳಿತ್ತು, ಆದರೆ ಚಿದಂಬರಂ ವಕೀಲರು ಅವರು ತನಿಖಾ ಸಂಸ್ಥೆ ಕರೆದಾಗಲೆಲ್ಲಾ ಹಾಜರಾಗುತ್ತಾರೆ ಎಂದು ಹೇಳಿ ಜಾಮೀನು ಕೋರಿದ್ದರು.ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಚಿದಂಬರಂ ಸಲ್ಲಿಸಿದ್ದ ಮನವಿಯನ್ನು ನಾಳೆ ಸುಪ್ರೀಕೋರ್ಟ್ ನ್ಯಾಯಮೂರ್ತಿ ಆರ್ ಬಾನುಮತಿ ಮತ್ತು ನ್ಯಾಯಮೂರ್ತಿ ಎ ಎಸ್ ಬೋಪಣ್ಣ ರನ್ನು ಒಳಗೊಂಡ ಪೀಠ ವಿಚಾರಣೆ ನಡೆಸಲಿದೆ. ಸಿಬಿಐ ಮತ್ತು ಇಡಿ ಪ್ರಕರಣಗಳಲ್ಲಿ ಅವರ ನಿರೀಕ್ಷಿತ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು ಈ ಹಿನ್ನಲೆಯಲ್ಲಿ ಅವರು ಬುಧುವಾರ ರಾತ್ರಿ ಸಿಬಿಐ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.