ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಬುಧವಾರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.


COMMERCIAL BREAK
SCROLL TO CONTINUE READING

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಪಿ.ಚಿದಂಬರಂ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರವಷ್ಟೇ ಸಿಬಿಐ ದಾಖಲಿಸಿದ ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ, ಇಡಿ ಕಸ್ಟಡಿಯಿಂದ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತನಿಖೆ ನಡೆಸಿದ ಸಿಬಿಐ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಚಿದಂಬರಂ ಮತ್ತು 13 ಮಂದಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಚಿದಂಬರಂ ವಿರುದ್ಧ ಮೊದಲು ದಾಖಲಿಸಲಾಗಿದ್ದ ಎಫ್‍ಐಆರ್‍ನಲ್ಲಿ 3.1 ಕೋಟಿ ಲಂಚ ಸ್ವೀಕರಿಸಲಾಗಿದೆ ಎಂಬ ಆರೋಪ ಮಾಡಲಾಗಿತ್ತು. ಚಾರ್ಜ್‍ಶೀಟ್‍ನಲ್ಲಿ ಲಂಚದ ಮೊತ್ತವನ್ನು 9.96 ಲಕ್ಷ ಎಂದು ಉಲ್ಲೇಖಿಸಲಾಗಿದೆ.


2007 ರಲ್ಲಿ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ ಐಎನ್‌ಎಕ್ಸ್ ಮೀಡಿಯಾಕ್ಕೆ 305 ಕೋಟಿ ರೂ.ಗೆ ನೀಡಿದ್ದ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ (ಎಫ್‌ಐಪಿಬಿ) ಕ್ಲಿಯರೆನ್ಸ್‌ನಲ್ಲಿನ ಅಕ್ರಮಗಳ ಆರೋಪದಲ್ಲಿ ಸಿಬಿಐ ದಾಖಲಿಸಿದ ಎಫ್‌ಐಆರ್‌ಗೆ ಈ ಪ್ರಕರಣ ಸಂಬಂಧಿಸಿದ್ದು, ಹಣ ವರ್ಗಾವಣೆ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಬಂಧಿಸಿತ್ತು.