ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ ಜಾಮೀನು ಅರ್ಜಿ ಕುರಿತು ಸಿಬಿಐಗೆ ಸುಪ್ರೀಂ ನೋಟಿಸ್

 ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ಜಾಮೀನು ಮನವಿಗೆ ಸ್ಪಂದಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ನೋಟಿಸ್ ನೀಡಿದೆ.

Last Updated : Oct 4, 2019, 03:15 PM IST
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ ಜಾಮೀನು ಅರ್ಜಿ ಕುರಿತು ಸಿಬಿಐಗೆ ಸುಪ್ರೀಂ ನೋಟಿಸ್ title=

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ಜಾಮೀನು ಮನವಿಗೆ ಸ್ಪಂದಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ನೋಟಿಸ್ ನೀಡಿದೆ.

ನ್ಯಾಯಮೂರ್ತಿಗಳಾದ ಆರ್.ಬಾನುಮತಿ ಮತ್ತು ಹೃಷಿಕೇಶ ರಾಯ್ ಅವರಿದ್ದ ನ್ಯಾಯಪೀಠವು ಸಿಬಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪ್ರತಿಕ್ರಿಯಿಸುವಂತೆ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿದೆ.

ಈ ಪ್ರಕರಣದಲ್ಲಿ ಪಿ.ಚಿದಂಬರಂ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆ.30ರಂದು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ, ನ್ಯಾಯಾಂಗ ಬಂಧನದಡಿ ತಿಹಾರ್ ಜೈಲಿನಲ್ಲಿರುವ ಚಿದಂಬರಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಐಎನ್‌ಎಕ್ಸ್‌ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಪಿ. ಚಿದಂಬರಂ ಅವರನ್ನು ಕಳೆದ ಆಗಸ್ಟ್‌ 21ರಂದು ಚಿದಂಬರಂ ಅವರನ್ನು ಬಂಧಿಸಲಾಗಿತ್ತು. ಚಿದಂಬರಂ ಅವರು ಸೆಪ್ಟಂಬರ್‌ 5ನೇ ತಾರೀಖಿರಿಂದಲೂ ತಿಹಾರ್‌ ಜೈಲಿನಲ್ಲಿದ್ದಾರೆ.
 

Trending News