IOCL Recruitment 2021 : ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನಾಂಕ
IOCL Recruitment 2021 Notification: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (Indian Oil Corporation Limited IOCL) ತಾಂತ್ರಿಕ ಅಪ್ರೆಂಟಿಸ್ ಮತ್ತು ತಾಂತ್ರಿಕೇತರ ವ್ಯಾಪಾರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ಒಟ್ಟು 505 ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು. ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಮತ್ತು ಮಾಹಿತಿಯನ್ನು ತಿಳಿದುಕೊಳ್ಳಿ.
ನವದೆಹಲಿ : ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (Indian Oil Corporation Limited IOCL) ತಾಂತ್ರಿಕ ಅಪ್ರೆಂಟಿಸ್ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ (Non-Technical Trade Apprentice) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ಒಟ್ಟು 505 ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCLನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 26 ಫೆಬ್ರವರಿ 2021 ರೊಳಗೆ ಐಒಸಿಎಲ್ ಅಪ್ರೆಂಟಿಸ್ ನೇಮಕಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅಪ್ಲಿಕೇಶನ್‌ಗೆ ಸಂಬಂಧಿಸಿದ ಪ್ರಮುಖ ಮಾಹಿತಿ :
ಐಒಸಿಎಲ್ (IOCL) ನೀಡಿರುವ ಅಧಿಸೂಚನೆಯ ಪ್ರಕಾರ, ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಈ ಪರೀಕ್ಷೆಯು 14 ಮಾರ್ಚ್ 2021 ರಂದು ನಡೆಯಲಿದೆ. ಪೂರ್ವ ವಲಯ, ಪಶ್ಚಿಮ ಬಂಗಾಳ (West Bengal), ಬಿಹಾರ, ಒಡಿಶಾ, ಜಾರ್ಖಂಡ್ ಮತ್ತು ಅಸ್ಸಾಂ ಸ್ಥಳಗಳಲ್ಲಿ ಈ ನೇಮಕಾತಿ ನಡೆಯಲಿದೆ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - 28 ಜನವರಿ 2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 26 ಫೆಬ್ರವರಿ 2021
ಐಒಸಿಎಲ್ ಅಪ್ರೆಂಟಿಸ್ ಅಡ್ಮಿಟ್ ಕಾರ್ಡ್ ವಿತರಣೆ ದಿನಾಂಕ - 01 ಮಾರ್ಚ್ 2021
ಐಒಸಿಎಲ್ ಅಪ್ರೆಂಟಿಸ್ ಪರೀಕ್ಷೆಯ ದಿನಾಂಕ - 14 ಮಾರ್ಚ್ 2021
ಐಒಸಿಎಲ್ ಅಪ್ರೆಂಟಿಸ್ ಪರೀಕ್ಷೆಯ ಫಲಿತಾಂಶ ದಿನಾಂಕ - 25 ಮಾರ್ಚ್ 2021
ಇದನ್ನೂ ಓದಿ - Recruitment 2021: ಡಿಜಿಟಲ್ ಶಿಕ್ಷಣ ಸಂಸ್ಥೆಯಲ್ಲಿ 433 ಹುದ್ದೆಗಳಿಗೆ ಅರ್ಜಿ: SSLC ಆದವರಿಗೂ ಅವಕಾಶ!
ಶೈಕ್ಷಣಿಕ ವಿದ್ಯಾರ್ಹತೆ :
ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಈ ಹುದ್ದೆಯಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 24 ವರ್ಷ ವಯಸ್ಸಿನವರಾಗಿರಬೇಕು.
ಇದನ್ನೂ ಓದಿ - HAL Recruitment 2021: ಹೆಚ್‌ಎಎಲ್ ನಲ್ಲಿ 165 ಹುದ್ದೆಗಳಿಗೆ ಅರ್ಜಿ ಆಹ್ವಾನ!
ತರಬೇತಿ ಪ್ರಕ್ರಿಯೆ :
ಇದಲ್ಲದೆ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 15 ತಿಂಗಳ ತರಬೇತಿ ನೀಡಲಾಗುವುದು. ಇದಲ್ಲದೆ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 14 ತಿಂಗಳ ತರಬೇತಿ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಅಪ್ರೆಂಟಿಸ್ ಹುದ್ದೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ. ಇದಲ್ಲದೆ, ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ (iocl.com) ನಲ್ಲಿ ಅಧಿಸೂಚನೆಯನ್ನು ಓದಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.