ಕಾಂಗ್ರೆಸ್ ಪಕ್ಷಕ್ಕೆ ಸೇರ್ತಾರಾ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್..?

ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ ಒಂದು ದಿನದ ನಂತರ, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ವದಂತಿಗಳು ತೀವ್ರವಾಗಿವೆ.

Written by - Zee Kannada News Desk | Last Updated : Jul 14, 2021, 03:39 PM IST
  • ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ ಒಂದು ದಿನದ ನಂತರ, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ವದಂತಿಗಳು ತೀವ್ರವಾಗಿವೆ.
  • ಮುಂಬರುವ ದಿನಗಳಲ್ಲಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಇದಾದ ನಂತರ ಸಾರ್ವತ್ರಿಕ ಚುನಾವಣೆ ಬರುವ ಹಿನ್ನಲೆಯಲ್ಲಿ ಪಕ್ಷದಲ್ಲಿ ಅವರಿಗೆ ನೀಡುವ ಸ್ಥಾನದ ವಿಚಾರವಾಗಿ ಚರ್ಚೆಗಳನ್ನು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಕಾಂಗ್ರೆಸ್ ಪಕ್ಷಕ್ಕೆ ಸೇರ್ತಾರಾ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್..? title=
ಸಂಗ್ರಹ ಚಿತ್ರ

ನವದೆಹಲಿ: ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ ಒಂದು ದಿನದ ನಂತರ, ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ವದಂತಿಗಳು ತೀವ್ರವಾಗಿವೆ.

ಮುಂಬರುವ ದಿನಗಳಲ್ಲಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಇದಾದ ನಂತರ ಸಾರ್ವತ್ರಿಕ ಚುನಾವಣೆ ಬರುವ ಹಿನ್ನಲೆಯಲ್ಲಿ ಪಕ್ಷದಲ್ಲಿ ಅವರಿಗೆ ನೀಡುವ ಸ್ಥಾನದ ವಿಚಾರವಾಗಿ ಚರ್ಚೆಗಳನ್ನು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.ಮಂಗಳವಾರ ರಾಹುಲ್ ಗಾಂಧಿ ಅವರ ನಿವಾಸದಲ್ಲಿ  ನಡೆದ ಸಭೆಯಲ್ಲಿ ಪ್ರಿಯಾಂಕಾ,ಮತ್ತು ಸೋನಿಯಾ ಗಾಂಧಿ ಕೂಡ ಪ್ರಶಾಂತ್ ಕಿಶೋರ್ (Prashant Kishor) ಅವರೊಂದಿಗೆ ಚರ್ಚೆಯ ಭಾಗವಾಗಿದ್ದರು ಎನ್ನಲಾಗಿದೆ. ಆದರೆ ಮೂಲಗಳ ಪ್ರಕಾರ ಸಭೆ ನಡೆಯುತ್ತಿರುವುದು ಇದು ಮೊದಲ ಬಾರಿಗೆ ಅಲ್ಲ ಎನ್ನಲಾಗಿದೆ.

ಇದನ್ನೂ ಓದಿ: 'ಚುನಾವಣಾ ಚತುರ' ಪ್ರಶಾಂತ್ ಕಿಶೋರ್ ಗೆ ಕ್ಯಾಬಿನೆಟ್ ರ್ಯಾಂಕ್ ಹುದ್ದೆ ನೀಡಿದ ಪಂಜಾಬ್ ಸಿಎಂ

ಈ ಸಭೆ ಕೇವಲ ಪಂಜಾಬ್ ಮತ್ತು ಉತ್ತರ ಪ್ರದೇಶದ ಚುನಾವಣೆಯ ಹಿನ್ನಲೆಯಲ್ಲಿ ನಡೆದಿಲ್ಲ, ಬದಲಾಗಿದೆ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯ ತಂತ್ರಗಾರಿಕೆಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಪ್ರಶಾಂತ್ ಕ್ರಿಶೋರ್ ಅವರ ಪಾತ್ರವನ್ನು ನೋಡುತ್ತಿರುವುದನ್ನು ಸೂಚಿಸುತ್ತದೆ ಎನ್ನಲಾಗಿದೆ.ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ರೂಪಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಫಲಿತಾಂಶದ ನಂತರ ತಮ್ಮ ಚುನಾವಣಾ ತಂತ್ರಗಾರಿಕೆ ಸ್ಥಾನವನ್ನು ತ್ಯಜಿಸುವುದಾಗಿ ಹೇಳಿಕೆ ನೀಡಿದ್ದರು.

'ನಾನು ಏನು ಮಾಡುತ್ತಿದ್ದೇನೆ ಎಂದು ಮುಂದುವರಿಸಲು ನಾನು ಬಯಸುವುದಿಲ್ಲ. ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಜಾಗವನ್ನು ತ್ಯಜಿಸಲು ಬಯಸುತ್ತೇನೆ" ಎಂದು ಮಾಧ್ಯಮಗಳಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದರು.

ಇದನ್ನೂ ಓದಿ: West Bengal Election Result 2021: ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ನ ಶಾಕಿಂಗ್ ಹೇಳಿಕೆ...!

ಮತ್ತೆ ರಾಜಕೀಯ ಸೇರುತ್ತಾರೆಯೇ ಎನ್ನುವ ವಿಚಾರವಾಗಿ ಗಮನ ಸೆಳೆದಾಗ ಅವರು ತಮ್ಮನ್ನು ವಿಫಲ ರಾಜಕಾರಣಿ ಎಂದು ಹೇಳಿಕೊಂಡಿದ್ದರು.ನಾನು ಹಿಂತಿರುಗಿ ಏನು ಮಾಡಬೇಕು ಎನ್ನುವುದನ್ನು ನೋಡಬೇಕು ಎಂದು ಹೇಳುತ್ತಾ, ತಾವು ತಮ್ಮ ಕುಟುಂಬದೊಂದಿಗೆ ಅಸ್ಸಾಂಗೆ ಹೋಗಿ ಚಹಾ ತೋಟಗಾರಿಕೆ ಮಾಡುವ ಬಗ್ಗೆ ಮಾತನಾಡಿದ್ದರು.

ಅಷ್ಟಕ್ಕೂ ಕಾಂಗ್ರೆಸ್ ಜೊತೆಗಿನ ಪ್ರಶಾಂತ್ ಕಿಶೋರ್ ಅನುಭವ ಅಷ್ಟೊಂದು ತೃಪ್ತಿಕರವಾಗಿಲ್ಲ, 2017 ರಲ್ಲಿ ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆಗೆ ಸಮಾಜವಾದಿ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಂಡರೂ ಮೈತ್ರಿ ವಿಫಲವಾಯಿತು ಮತ್ತು ಬಿಜೆಪಿ ಜಯಗಳಿಸಿತು. ಅಂದಿನಿಂದ, ಅವರು ಕಾಂಗ್ರೆಸ್ ಪಕ್ಷದ ಮತ್ತು ಅದರ ಕಾರ್ಯವೈಖರಿಯನ್ನು ಹೆಚ್ಚಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ ಟಿಎಂಸಿ ಅಭ್ಯರ್ಥಿಯಾಗಲಿದ್ದಾರೆ ಪ್ರಶಾಂತ್ ಕಿಶೋರ್...!

'ಪ್ರಶಾಂತ್ ಕಿಶೋರ್ ಅಥವಾ ಇತರರು ಸೂಚಿಸಿದ ಮಾರ್ಗಗಳಲ್ಲಿ ಕೆಲಸ ಮಾಡಲು ಅವರು ಮುಕ್ತರಾಗಿಲ್ಲ. ಅವರು ನನ್ನ ಕಾರ್ಯವೈಖರಿಯೊಂದಿಗೆ ಕೆಲಸ ಮಾಡಲು ಮುಕ್ತರಾಗಿರುವುದಿಲ್ಲ. ಇದು ಕಾಂಗ್ರೆಸ್ ಪಕ್ಷದ ಸಮಸ್ಯೆ ಇದನ್ನು ಅದು ಅರ್ಥ ಮಾಡಿಕೊಳ್ಳಬೇಕು ಆಗ ಏನಾದರೂ  ಮಾಡಬಹುದು ಎಂದು ಅವರು ಹೇಳಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News