ಮುಂಬೈ: ಸಚಿವ ಮತ್ತು ಶಿವಸೇನಾ ನಾಯಕ ಏಕನಾಥ್ ಶಿಂಧೆ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ಗೆ 21 ಇತರ ಶಾಸಕರೊಂದಿಗೆ ತೆರಳಿದ್ದಾರೆಂದು ವರದಿಯಾದ ನಂತರ ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವು ಇಕ್ಕಟ್ಟಿಗೆ ಸಿಲುಕಿದೆ. ಇದು ‘ಮಹಾ ಸರ್ಕಾರ’ದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.


COMMERCIAL BREAK
SCROLL TO CONTINUE READING

ಇಂದು(ಜೂ.21)ಸಂಜೆಯ ವೇಳೆಗೆ ಮಹಾರಾಷ್ಟ್ರ ಸರ್ಕಾರ ಪತನವಾಗಿ, ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಪ್ರಸ್ತುತ ಏಕನಾಥ್ ಶಿಂಧೆ ಜೊತೆಗೆ ಸೂರತ್‌ನಲ್ಲಿ 29 ಶಿವಸೇನಾ ಶಾಸಕರಿದ್ದಾರೆ. ನಾವು ಕಾಂಗ್ರೆಸ್-ಎನ್‍ಸಿಪಿಯನ್ನು ಬೆಂಬಲಿಸುವುದಿಲ್ಲವೆಂದು ಈ ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಬಹುದು. ಆದರೆ, ಈ ಪತ್ರದಲ್ಲಿ ಶಿವಸೇನಾ ಹೆಸರನ್ನು ತೆಗೆದುಕೊಳ್ಳಲಾಗುವುದಿಲ್ಲವೆಂದು ಹೇಳಲಾಗುತ್ತಿದೆ.


Venkaiah Naidu: ಎಂ.ವೆಂಕಯ್ಯ ನಾಯ್ಡು ಮುಂದಿನ ರಾಷ್ಟ್ರಪತಿ..?


ಇದಲ್ಲದೆ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸಭೆಯಲ್ಲಿ ಪ್ರಸ್ತುತ ಹಾಜರಿರುವ 7 ಶಾಸಕರು ಏಕನಾಥ್ ಶಿಂಧೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಅಂತಾ ಮೂಲಗಳು ತಿಳಿಸಿವೆ. ಸೋಮವಾರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಈ ನಡುವೆ ‘ಮಹಾ ಸರ್ಕಾರ’ದಲ್ಲಿ ನಂಬರ್ ಗೇಮ್ ಶುರುವಾಗಿದೆ.


‘ಮಹಾ ಸರ್ಕಾರ’ದ ನಂಬರ್ ಗೇಮ್ ಹೀಗಿದೆ ನೋಡಿ


ಶಿವಸೇನಾ ಶಾಸಕರು ಪಕ್ಷ ತೊರೆಯಲು ನಿರ್ಧರಿಸಿದರೆ, ಅವರು ಪಕ್ಷಾಂತರ ವಿರೋಧಿ ಕಾನೂನಿನಡಿ ರಾಜೀನಾಮೆ ನೀಡಬೇಕು ಮತ್ತು ಉಪಚುನಾವಣೆಯಲ್ಲಿ ಮತ್ತೆ ಆಯ್ಕೆಯಾಗಬೇಕಾಗುತ್ತದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.