ಪ್ರಧಾನಿ ನರೇಂದ್ರ ಮೋದಿಯವರ ಮೊಹಾಲಿ ಭೇಟಿಗೂ ಮುನ್ನ ಪಂಜಾಬ್‌ನಲ್ಲಿ ಉಗ್ರರು ದಾಳಿ ನಡೆಸುವ ಎಚ್ಚರಿಕೆ ನೀಡಲಾಗಿದೆ. ಪಂಜಾಬ್‌ನಲ್ಲಿ ಭಯೋತ್ಪಾದನೆಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್‌ಐ) ಸಂಚು ರೂಪಿಸಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಚಂಡೀಗಢ ಮತ್ತು ಮೊಹಾಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ದೇಶದ ಗುಪ್ತಚರ ಸಂಸ್ಥೆಗಳು ಮಹತ್ವದ ಎಚ್ಚರಿಕೆಯನ್ನು ನೀಡಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವೂಟ್ ನಲ್ಲಿ ‘ಸೈಬರ್ ವಾರ್’: ತೆರೆಗೆ ಬರಲಿದೆ ‘ಮುಂಬೈ ಅಪರಾಧ ಲೋಕ‘


ಎಚ್ಚರಿಕೆಯ ಮಾಹಿತಿ ಪ್ರಕಾರ, ಚಂಡೀಗಢ ಮತ್ತು ಮೊಹಾಲಿಯಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯಿದೆ. ಭಯೋತ್ಪಾದಕರು ಬಸ್ ನಿಲ್ದಾಣವನ್ನು ಗುರಿಯಾಗಿಸಬಹುದು ಎಂದು ತಿಳಿಸಿದೆ.


ಗುಪ್ತಚರ ಸಂಸ್ಥೆಗಳು ರಾಜ್ಯ ಪೊಲೀಸ್, ಜಿಆರ್‌ಪಿ ಮತ್ತು ರಾಜ್ಯ ಗುಪ್ತಚರ ಸಂಸ್ಥೆಗಳಿಗೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪಂಜಾಬ್‌ನಲ್ಲಿ ಭಯೋತ್ಪಾದನೆ ಮಾಡಲು ದೊಡ್ಡ ಸಂಚು ರೂಪಿಸಿದೆ ಎಂದು ಗುಪ್ತಚರ ಸಂಸ್ಥೆಗಳನ್ನು ಉಲ್ಲೇಖಿಸಿವೆ.


ಭಯೋತ್ಪಾದಕರ ಗುರಿಯಲ್ಲಿ ಪಂಜಾಬ್‌ನ 10 ನಾಯಕರು: ಪಂಜಾಬ್‌ನಲ್ಲಿ ಉಗ್ರರ ದಾಳಿಯ ಎಚ್ಚರಿಕೆ ಇದೆ. ಚಂಡೀಗಢ ಮತ್ತು ಮೊಹಾಲಿಯಲ್ಲಿ ಭಯೋತ್ಪಾದನೆಗೆ ಐಎಸ್‌ಐ ಸಂಚು ರೂಪಿಸಿದೆ. ಪಂಜಾಬ್‌ನ 10 ನಾಯಕರು ಭಯೋತ್ಪಾದಕರ ಟಾರ್ಗೆಟ್ ಲಿಸ್ಟ್ ನಲ್ಲಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ. ಕೇಂದ್ರ ಸರ್ಕಾರ ಅವರಿಗೆ ಭದ್ರತೆ ಒದಗಿಸುವ ಸಾಧ್ಯತೆಯಿದೆ. 


ಇದನ್ನೂ ಓದಿ: ಮೊಟ್ಟೆ ಎಸೆತ ಪ್ರಕರಣ: ಬಿಜೆಪಿ ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ನಡೆಸುತ್ತಿದೆ- ಸಿದ್ದರಾಮಯ್ಯ


ಪ್ರಧಾನಿ ಭೇಟಿ ಬಗ್ಗೆ ಏಜೆನ್ಸಿಗಳು ಅಲರ್ಟ್: ಇನ್ನು ಗಮನಾರ್ಹವಾಗಿ, ಪ್ರಧಾನಿ ನರೇಂದ್ರ ಮೋದಿಯವರ ಮೊಹಾಲಿ ಭೇಟಿಯ ಬಗ್ಗೆ ಏಜೆನ್ಸಿಗಳು ಅಲರ್ಟ್ ಆಗಿವೆ. ಎಲ್ಲೆಡೆ ಭದ್ರತೆ ಬಿಗಿಗೊಳಿಸಲಾಗಿದೆ. ಐಎಸ್‌ಐ ನಂಟು ಹೊಂದಿರುವ ವ್ಯಕ್ತಿಗಳ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.