21ನೇ ಶತಮಾನದಲ್ಲಿ ಭಾರತದ ನಿರೀಕ್ಷೆಯನ್ನು ಈಡೇರಿಸುವ ಬಜೆಟ್- ಪ್ರಧಾನಿ ಮೋದಿ
ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಕೇಂದ್ರದ ಬಜೆಟ್ ಭರವಸೆಯ ಬಜೆಟ್ ಆಗಿದೆ ಮತ್ತು ಇದು 21 ನೇ ಶತಮಾನದಲ್ಲಿ ಭಾರತದ ಅಭಿವೃದ್ಧಿಯನ್ನು ಹೆಚ್ಚಿಸುವ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ವಾಖ್ಯಾನಿಸಿದ್ದಾರೆ.
ನವದೆಹಲಿ: ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಕೇಂದ್ರದ ಬಜೆಟ್ ಭರವಸೆಯ ಬಜೆಟ್ ಆಗಿದೆ ಮತ್ತು ಇದು 21 ನೇ ಶತಮಾನದಲ್ಲಿ ಭಾರತದ ಅಭಿವೃದ್ಧಿಯನ್ನು ಹೆಚ್ಚಿಸುವ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ವಾಖ್ಯಾನಿಸಿದ್ದಾರೆ.
ಪ್ರಧಾನಿ ಮೋದಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ ನಂತರ ಮಾತನಾಡಿದ ಅವರು "ಬಜೆಟ್ ಉದ್ಯಮಗಳನ್ನು ಬಲಪಡಿಸುತ್ತದೆ, ದೇಶದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತದೆ, ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುತ್ತದೆ ಮತ್ತು ಮೂಲಸೌಕರ್ಯಗಳನ್ನು ಆಧುನೀಕರಿಸುತ್ತದೆ ಎಂದು ಹೇಳಿದರು.
ಈ ಬಜೆಟ್ ಕೃಷಿವಲಯದಲ್ಲಿನ ಪರಿವರ್ತನೆಗಾಗಿ ಸೂಕ್ತ ಮಾರ್ಗವನ್ನು ನಿರ್ಮಿಸುವ ಮೂಲಕ ನವ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಆಶಿಸಿದರು. ಮುಂದಿನ ಐದು ವರ್ಷಗಳಲ್ಲಿ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್‌ಗೆ ದ್ವಿಗುಣಗೊಳಿಸುವ ಪ್ರಧಾನ ಮಂತ್ರಿಯ ಗುರಿಯನ್ನು ಈ ಬಜೆಟ್ ಸಾಕಾರಗೊಳಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.