ನವದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿ ಜನರ ನೈಜ ಸಮಸ್ಯೆಗಳ ಬಗ್ಗೆ ಮಾತನಾಡದೆ ಇರುವುದು ಬಿಜೆಪಿ ಸೋಲುತ್ತಿರುವುದರ ಸೂಚನೆ ಎಂದು ಹೇಳಿದರು.



COMMERCIAL BREAK
SCROLL TO CONTINUE READING

"ಜನರಲ್ಲಿ ಕೋಪವಿದೆ, ಮತ್ತು ಅವರು ದುಃಖಕ್ಕೆ ಒಳಗಾಗಿದ್ದಾರೆ. ಮೋದಿಜಿ ನೈಜ ವಿಷಯಗಳ ಬಗ್ಗೆ ಮಾತನಾಡುವ ಬದಲು ಅನುಪಯುಕ್ತ  ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ.ಆದ್ದರಿಂದ ಈಗ, ಜನರು ಈ ಸರ್ಕಾರದ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲಿದ್ದಾರೆ " ಎಂದು ಉತ್ತರ ಪ್ರದೇಶದ ಪೂರ್ವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಿಟಿಐಗೆ ಹೇಳಿದ್ದಾರೆ.


ಬಿಜೆಪಿ ಅಧಿಕಾರದಿಂದ ಕೆಳಗೆ ಇಳಿಯುವುದು ಈಗ ಸ್ಪಷ್ಟವಾಗಿದೆ. ನಮ್ಮ ಪಕ್ಷದ ಎತ್ತಿರುವ ಯಾವುದೇ ಸಮಸ್ಯೆಗಳಿಗೆ ಪ್ರಧಾನಿ ಮೋದಿ ಬದಲಾಗಿ ಅನುಪಯುಕ್ತ  ವಿಷಯಗಳ ಬಗ್ಗೆ ಮಾತಾಡುತ್ತಿದ್ದಾರೆ.ನೈಜ ವಿಷಯಗಳ ಬಗ್ಗೆ ಚರ್ಚಿಸಲು ನಮ್ಮ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಎತ್ತಿರುವ ಸವಾಲಿಗೆ ಪ್ರಧಾನ ಮಂತ್ರಿ ಪ್ರತಿಕ್ರಿಯೆಯನ್ನು ಸಹ ನೀಡಿಲ್ಲವೆಂದು ಪ್ರಿಯಾಂಕಾ ಹೇಳಿದರು.