IT ರಿಟರ್ನ್ಸ್ ಸಲ್ಲಿಕೆಯ ಗಡುವು ಆಗಸ್ಟ್ 31ರವರೆಗೆ ವಿಸ್ತರಣೆ

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ಕ್ಕೆ ನಿಗದಿಯಾಗಿದ್ದ ಗಡುವನ್ನು ಒಂದು ತಿಂಗಳು ವಿಸ್ತರಿಸಲಾಗಿದೆ.

Last Updated : Jul 27, 2018, 10:49 AM IST
IT ರಿಟರ್ನ್ಸ್ ಸಲ್ಲಿಕೆಯ ಗಡುವು ಆಗಸ್ಟ್ 31ರವರೆಗೆ ವಿಸ್ತರಣೆ title=

ನವದೆಹಲಿ: ಆದಾಯ ತೆರಿಗೆ(IT) ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ಎಂದು ವಿತ್ತ ಸಚಿವಾಲಯ ತಿಳಿಸಿದೆ.

ಈ ವರ್ಷದ ಏಪ್ರಿಲ್ ನಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಹೊಸ ಫಾರ್ಮ್ ಗಳನ್ನು ಸರ್ಕಾರ ಪ್ರಕಟಿಸಿತ್ತು. ಅಲ್ಲದೆ ತೆರಿಗೆ ಪಾವತಿದಾರರಿಗೆ ಜುಲೈ 31ರವಗೆರ ಇ-ಫೈಲಿಂಗ್ ಮೂಲಕ IT ರಿಟರ್ನ್ಸ್ ಸಲ್ಲಿಕೆಗೆ ಅವಕಾಶ ನೀಡಿತ್ತು.

ಇದೀಗ 2018-19ನೇ ಸಾಲಿನ IT ರಿಟರ್ನ್ಸ್ ಸಲ್ಲಿಕೆಗೆ ಕೊನೆಯ ದಿನವನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಿದೆ.

Trending News