ನವದೆಹಲಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಶಕ್ತಿಯು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗ ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ಬಂದೂಕು ಹಿಡಿದ ಉಕ್ರೇನ್ ಸುಂದರಿ...!
ಉಕ್ರೇನ್‌ನಿಂದ ನಾಗರಿಕರನ್ನು ದೇಶಕ್ಕೆ ಕರೆತರಲು ತನ್ನ ಯಾವುದೇ ಪ್ರಯತ್ನದಿಂದ ಭಾರತ ಹಿಂದೆ ಸರಿಯುವುದಿಲ್ಲ ಎಂದು ಅವರು ಹೇಳಿದರು."ಭಾರತದ ಹೆಚ್ಚುತ್ತಿರುವ ಶಕ್ತಿಯಿಂದಾಗಿ ನಾವು ಉಕ್ರೇನ್ (Russia-Ukraine War) ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು" ಎಂದು ಯುಪಿಯ ಸೋನ್‌ಭದ್ರಾದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಹೇಳಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ: ಉಕ್ರೇನ್ ವಿಷಯದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿರುವುದೇಕೆ?
ಸಶಸ್ತ್ರ ಪಡೆಗಳ ಶೌರ್ಯ ಮತ್ತು ಮೇಕ್ ಇನ್ ಇಂಡಿಯಾವನ್ನು ಪ್ರಶ್ನಿಸುವವರು ದೇಶವನ್ನು ಬಲಿಷ್ಠಗೊಳಿಸಲಾರರು ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದರು.
ಈಗ ಪ್ರತಿಪಕ್ಷಗಳು ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿ ವಿದ್ಯಾರ್ಥಿಗಳ ಸ್ಥಳಾಂತರ ವಿಷಯದಲ್ಲಿ ಎದುರಾಗಿರುವ ಅವಸ್ಥೆ ಕುರಿತಾಗಿ ವಾಗ್ದಾಳಿ ನಡೆಸಿವೆ.ಈಗ ಪ್ರಧಾನಿ ಮೋದಿ ಅವರು ಉಕ್ರೇನ್ (Ukraine) ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಕುರಿತು ಮೂರು ದಿನಗಳಲ್ಲಿ ನಾಲ್ಕು ಸಭೆಗಳನ್ನು ನಡೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.