ವಿಜಯವಾಡ: ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಟಿಡಿಪಿ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ 'ಪ್ರಜಾ ವೇದಿಕೆ' ಕಟ್ಟಡವನ್ನು ನೆಲಸಮ ಮಾಡಲು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸೋಮವಾರ ಆದೇಶಿಸಿದರು.


COMMERCIAL BREAK
SCROLL TO CONTINUE READING

ವಿಪರ್ಯಾಸವೆಂದರೆ, ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಈ ಕಟ್ಟಡದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ದಿನದಂದೇ ಇದನ್ನು ಕೆಡವಲು ಆದೇಶಿಸಿದರು. ಈ ವೇಳೆ ಮಾತನಾಡಿದ ಜಗನ್ ಮೋಹನ್ ರೆಡ್ಡಿ, "ನಾವು ಈ ಸಭೆಯನ್ನು ನಡೆಸುತ್ತಿರುವ ಕಟ್ಟಡವನ್ನು ನಿಯಮಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ" ಎಂದು ಘೋಷಿಸಿದರು.


ಈ ಕಟ್ಟಡದಲ್ಲಿ ನಡೆಯುತ್ತಿರುವ ಕೊನೆಯ ಅಧಿಕೃತ ಸಭೆ ಇದಾಗಿದ್ದು, ಹಿಂದಿನ ಸರ್ಕಾರ ಕಾನೂನುಬಾಹಿರವಾಗಿ, ನಿಯಮಗಳನ್ನು ಗಾಳಿಗೆ ತೂರಿ ನಿರ್ಮಿಸಿರುವ ಈ ಕಟ್ಟಡವನ್ನು ನೆಲಸಮಗೊಳಿಸುವ ಕೆಲಸ ಒಂದೆರಡು ದಿನಗಳಲ್ಲಿ ನಡೆಯಲಿದೆ ಎಂದು ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.