ಆಂಧ್ರಪ್ರದೇಶ: ಪ್ರಜಾ ವೇದಿಕೆ ಕಟ್ಟಡ ನೆಲಸಮಕ್ಕೆ ಆದೇಶಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

ಚಂದ್ರಬಾಬು ನಾಯ್ಡು ಸಿಎಂ ಆಗಿದ್ದ ವೇಳೆಯಲ್ಲಿ ಆಡಳಿತ ಸಂಬಂಧಿತ ಎಲ್ಲಾ ಕಾರ್ಯಗಳು ಇದೇ ಕಟ್ಟಡದಲ್ಲಿ ನಡೆಯುತ್ತಿತ್ತು.  

Last Updated : Jun 24, 2019, 03:15 PM IST
ಆಂಧ್ರಪ್ರದೇಶ: ಪ್ರಜಾ ವೇದಿಕೆ ಕಟ್ಟಡ ನೆಲಸಮಕ್ಕೆ ಆದೇಶಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ title=
Photo courtesy: Andhra Pradesh government

ವಿಜಯವಾಡ: ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಟಿಡಿಪಿ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ 'ಪ್ರಜಾ ವೇದಿಕೆ' ಕಟ್ಟಡವನ್ನು ನೆಲಸಮ ಮಾಡಲು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸೋಮವಾರ ಆದೇಶಿಸಿದರು.

ವಿಪರ್ಯಾಸವೆಂದರೆ, ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಈ ಕಟ್ಟಡದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ದಿನದಂದೇ ಇದನ್ನು ಕೆಡವಲು ಆದೇಶಿಸಿದರು. ಈ ವೇಳೆ ಮಾತನಾಡಿದ ಜಗನ್ ಮೋಹನ್ ರೆಡ್ಡಿ, "ನಾವು ಈ ಸಭೆಯನ್ನು ನಡೆಸುತ್ತಿರುವ ಕಟ್ಟಡವನ್ನು ನಿಯಮಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ" ಎಂದು ಘೋಷಿಸಿದರು.

ಈ ಕಟ್ಟಡದಲ್ಲಿ ನಡೆಯುತ್ತಿರುವ ಕೊನೆಯ ಅಧಿಕೃತ ಸಭೆ ಇದಾಗಿದ್ದು, ಹಿಂದಿನ ಸರ್ಕಾರ ಕಾನೂನುಬಾಹಿರವಾಗಿ, ನಿಯಮಗಳನ್ನು ಗಾಳಿಗೆ ತೂರಿ ನಿರ್ಮಿಸಿರುವ ಈ ಕಟ್ಟಡವನ್ನು ನೆಲಸಮಗೊಳಿಸುವ ಕೆಲಸ ಒಂದೆರಡು ದಿನಗಳಲ್ಲಿ ನಡೆಯಲಿದೆ ಎಂದು ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

Trending News