ನವದೆಹಲಿ: ಜಗನ್ ಮೋಹನ್ ರೆಡ್ಡಿ ನೇತೃತ್ವದ ಯೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುನ್ನಡೆ ಸಿಕ್ಕಿದ. ಮತ್ತೊಮ್ಮೆ ಅಧಿಕಾರ ಹಿಡಿಯುವ ಭರವಸೆಯಲ್ಲಿದ್ದ ಟಿಡಿಪಿ ಚಂದ್ರಬಾಬು ನಾಯ್ಡುಗೆ ಹಿನ್ನಡೆಯಾಗಿದೆ.


COMMERCIAL BREAK
SCROLL TO CONTINUE READING

ಸದ್ಯ ಬಂದಿರುವ ಮಾಹಿತಿ ಪ್ರಕಾರ 175 ವಿಧಾನಸಭಾ ಕ್ಷೇತ್ರಗಳಲ್ಲಿ ಜಗನ್ ಅವರ ಯೈ ಎಸ್ಆರ್ ಕಾಂಗ್ರೆಸ್ ಪಕ್ಷವು 142 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನೊಂದೆಡೆಗೆ ಆಡಳಿತಾರೂಢ ತೆಲುಗು ದೇಶಂ ಪಕ್ಷದ ಕೇವಲ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಭಾರಿ ಮುಖಭಂಗ ಅನುಭವಿಸಿದೆ.


ಇನ್ನೊಂದೆಡೆ ಲೋಕಸಭೆ ಎಲ್ಲ 25 ಕ್ಷೇತ್ರಗಳಲ್ಲಿ ಯೈಎಸ್ಆರ್ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.ಟಿಡಿಪಿ ಶೂನ್ಯ ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ.


ಆಂಧ್ರದ ವಿಭಜನೆಗೂ ಮುನ್ನ ಮುಖ್ಯಮಂತ್ರಿ ಸ್ಥಾನ ಸಿಗದ ಹಿನ್ನಲೆಯಲ್ಲಿ ತಮ್ಮ ತಂದೆ ಹೆಸರಿನಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಹುಟ್ಟುಹಾಕಿದ್ದರು. ಇದಾದ ನಂತರ ರಾಜ್ಯದಲ್ಲಿ ಜಗನ್ ಅವರು ಕೈಕೊಂಡ ಪಾದಾಯಾತ್ರೆಗಳು ನೂತನ ಪಕ್ಷವನ್ನು ಬಳಪಡಿಸಿದವು. 


ಇನ್ನೊಂದೆಡೆಗೆ ಟಿಡಿಪಿ ಚಂದ್ರಬಾಬು ನಾಯ್ಡು ಅವರು ಎನ್ಡಿಎ ಭಾಗವಾಗಿದ್ದರೂ ಕೂಡ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಧಕ್ಕಿಸಿಕೊಡುವಲ್ಲಿ ವಿಫಲರಾಗಿದ್ದರು. ಈ ಹಿನ್ನಲೆಯಲ್ಲಿ ಅವರು ಎನ್ಡಿಎ ಸರ್ಕಾರದಿಂದ ಹೊರಗೆ ಬಂದಿದ್ದರು.ಆದರೆ ಈಗ ಭಾರಿ ಮುಖಭಂಗವನ್ನು ಅನುಭವಿಸಿದೆ.