ಹೊಸ ಕಾಶ್ಮೀರ ಮನವೊಲಿಕೆ ಮಾಡುವಲ್ಲಿ ವಿಫಲವಾಯ್ತಾ ಬಿಜೆಪಿ! ಗಡಿಯಲ್ಲಿನ ಸೋಲಿಗೆ ಕಾರಣವಾಗಿದ್ದೇ ಈ ಅಂಶಗಳು?
Jammu and Kashmir assembly elections 2024: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ.
Jammu and Kashmir assembly elections 2024: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಬಿಜೆಪಿ 29 ಸ್ಥಾನಗಳನ್ನು ಗಳಿಸಿದೆ. ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿ 48 ಸ್ಥಾನಗಳನ್ನು ಗಳಿಸಿದೆ. ಕಾಶ್ಮೀರ ಕಣಿವೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದ್ದೇನು?
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ್ದರೂ ಮೋದಿ ಮೇಲೆ ಜನರ ಭರವಸೆ ಮೂಡದಿರಲು ಕೆಲವು ಕಾರಣಗಳಿವೆ ಎಂದು ಜನರು ಅಭಿಪ್ರಾಯಪಡುತ್ತಿದ್ದಾರೆ. ಹೊಸ ಕಾಶ್ಮೀರ ಮನವೊಲಿಕೆ ಮಾಡುವಲ್ಲಿ ಬಿಜೆಪಿ ವಿಫಲವಾಯ್ತಾ ಎಂಬ ಪ್ರಶ್ನೆ ಮೂಡಿದೆ.
ಬಿಜೆಪಿ ಸೋಲಿಗೆ ಇದು ಮುಖ್ಯ ಕಾರಣ ಎನ್ನಲಾಗುತ್ತಿದೆ.
ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ), ಪಿಡಿಪಿಯಂತಹ ಪ್ರಾದೇಶಿಕ ಪಕ್ಷಗಳು ಕಾಶ್ಮೀರಿ ವಿರೋಧಿ ನೀತಿಯನ್ನೇ ಬಿಜೆಪಿ ವಿರುದ್ಧ ಅಸ್ತ್ರ ಮಾಡಿಕೊಂಡು ಕಣಕ್ಕಿಳಿದವು. ಭಯೋತ್ಪಾದನೆ ನಿಗ್ರಹದ ಹೆಸರಿನಲ್ಲಿ ಭಾರೀ ಭದ್ರೆತೆ ಇಟ್ಟಿರುವುದು ಸಹ ಬಿಜೆಪಿಗೆ ನೆಗೆಟಿವ್ ಪಾಯಿಂಟ್ ಆಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಸಿಎಂ ಸಿದ್ದರಾಮಯ್ಯನೇ ಕಾರಣ! ʼಕೈʼ ನಾಯಕನಿಂದಲೇ ಗಂಭೀರ ಆರೋಪ
ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಭರವಸೆಗೂ ವಾಸ್ತವಕ್ಕೂ ಅಂತರವಿದೆ. ಜಮ್ಮು ಕಾಶ್ಮೀರದ ಅನೇಕ ಯುವಕರು ಈಗಲೂ ನಿರುದ್ಯೋಗಿಗಳಾಗಿಯೇ ಇದ್ದಾರೆ. ನಿರುದ್ಯೋಗ ಸಮಸ್ಯೆ ಕೂಡ ಬಿಜೆಪಿಯ ಸೋಲಿನ ಒಂದು ಕಾರಣವಾಗಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಈ ಬಾರಿ ಜಮ್ಮು ಕಾಶ್ಮೀರದಲ್ಲಿ ಬಿಜೆಪಿಗೆ ಬಹುದೊಡ್ಡ ಹೊಡೆತ ಕೊಟ್ಟಿದೆ. ಬಿಜೆಪಿಯ ವಿರುದ್ಧ ಕಾಶ್ಮೀರಿ ವಿರೋಧಿ ನಿರೂಪಣೆ ರೂಪಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ಜಮ್ಮುವಿನಲ್ಲಿ ಜನರ ಮನವೊಲಿಸುವ ಪ್ರಯತ್ನ ಮಾಡಿತಾದರೂ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದವು. ಈ ಕಾರಣಗಳಿಂದ ಬಿಜೆಪಿಗೆ ಕಾಶ್ಮೀರದ ಕಣಿವೆಯಲ್ಲಿ ಗೆಲುವು ದಕ್ಕಲಿಲ್ಲ ಎನ್ನಲಾಗುತ್ತಿದೆ.
ಇದನ್ನೂ ಓದಿ: ಸಂಭ್ರಮಿಸುತ್ತಿದ್ದ ಕಾಂಗ್ರೆಸ್ ಕಚೇರಿಯಲ್ಲಿ ಶೋಕ, ದುಃಖ ಆವರಿಸಿದ್ದ ಬಿಜೆಪಿ ಕಚೇರಿಯಲ್ಲಿ ಸಂಭ್ರಮ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.