ಜಮ್ಮು-ಕಾಶ್ಮೀರದ ಟ್ರಾಲ್‌ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಖಾಮುಖಿ

ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಖಾಮುಖಿಯಾಗಿದೆ. ಈ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ.

Last Updated : Jun 26, 2020, 09:35 AM IST
ಜಮ್ಮು-ಕಾಶ್ಮೀರದ ಟ್ರಾಲ್‌ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಖಾಮುಖಿ  title=

ಶ್ರೀನಗರ: ಕರೋನಾ ಯುಗದಲ್ಲೂ ಭಯೋತ್ಪಾದಕರು ತಮ್ಮ ವರ್ತನೆಗಳನ್ನು ಬದಲಾಯಿಸಿಕೊಳ್ಳುತ್ತಿಲ್ಲ. ಜಮ್ಮು ಮತ್ತು ಕಾಶ್ಮೀರದ (Jammu and Kashmir) ಟ್ರಾಲ್‌ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಖಾಮುಖಿಯಾಗಿದೆ. ಈ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ.

ಪುಲ್ವಾಮಾ ಜಿಲ್ಲೆಯ ಅವಂತಿಪುರ ಪ್ರದೇಶದ ಚೆವಾ ಉಲ್ಲಾರ್ (ಟ್ರಾಲ್) ನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಖಾಮುಖಿಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದರು.

ಎನ್‌ಕೌಂಟರ್‌ನಲ್ಲಿ (Encounter) ಅಪರಿಚಿತ ಭಯೋತ್ಪಾದಕನನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಇದಕ್ಕೂ ಮುನ್ನ ಗುರುವಾರ ಟ್ರಾಲ್‌ನಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮುಖಾಮುಖಿಯಾಗಿದ್ದು ಇದರಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಹಳ್ಳಿಯಲ್ಲಿ ಕೆಲವು ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಜಮ್ಮು ಮತ್ತು ಕಾಶ್ಮೀರ ಪೊಲೀಸರು 42 ಆರ್ಆರ್ ಮತ್ತು ಸಿಆರ್ಪಿಎಫ್ ಕಾರ್ಡನ್ ಮತ್ತು ಸರ್ಚ್ ಆಪರೇಷನ್ (ಸಿಎಎಸ್ಒ) ಅನ್ನು ಪ್ರಾರಂಭಿಸಲಾಯಿತು ಎಂದು ಹೇಳಲಾಗಿದೆ.

ಅಡಗಿದ್ದ ಭಯೋತ್ಪಾದಕರಿಗೆ ಶರಣಾಗಲು ಸಂಪೂರ್ಣ ಅವಕಾಶ ನೀಡಲಾಗಿದೆ. ಆದರೆ ಸೇನೆಯ ಜಂಟಿ ತಂಡವು ಅನುಮಾನಾಸ್ಪದ ಸ್ಥಳವನ್ನು ಸುತ್ತುವರಿದಾಗ ಗುಪ್ತ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಲಾರಂಭಿಸಿದರು. ಈ ಸಂದರ್ಭದಲ್ಲಿ ಎನ್ಕೌಂಟರ್ ಆರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಗುರುವಾರ ಸೇನೆಯ ಎರಡನೇ ಕಾರ್ಯಾಚರಣೆಯಾಗಿದೆ. ಇದಕ್ಕೂ ಮುನ್ನ ಗುರುವಾರ ಬೆಳಿಗ್ಗೆ ಸೊಪೋರ್ ಜಿಲ್ಲೆಯ ಬಾರಾಮುಲ್ಲಾದ ಹಂದೇಶಿವ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದರು.

ಇದು ಜೂನ್ ತಿಂಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆದ 12 ನೇ ಎನ್‌ಕೌಂಟರ್‌ ಆಗಿದ್ದು ಈವರೆಗೆ ಸುಮಾರು 36 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಈ ವರ್ಷ  ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ಒಟ್ಟು ಭಯೋತ್ಪಾದಕರ ಸಂಖ್ಯೆ 109 ಕ್ಕೆ ಏರಿದೆ.

Trending News