ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆ

ಪಿಡಿಪಿ-ಕಾಂಗ್ರೆಸ್-ಎನ್ ಸಿ ಮೈತ್ರಿಕೂಟದ ಕಸರತ್ತು ವಿಫಲ

Last Updated : Nov 22, 2018, 07:50 AM IST
ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆ title=

ನವದೆಹಲಿ: ಬಿಜೆಪಿಯನ್ನು ಅಧಿಕಾರದಿಂದ ದೂರು ಇರಿಸಬೇಕೆಂಬ ಅಜೆಂಡಾದೊಂದಿಗೆ ಕಾಂಗ್ರೆಸ್‌, ಪಿಡಿಪಿ, ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿ ಸರಕಾರ ರಚಿಸಲು ಮುಂದಾದ ಬೆನ್ನಲ್ಲೇ ರಾಜ್ಯಪಾಲರು ವಿಧಾನಸಭೆ ವಿಸರ್ಜನೆ ಮಾಡಿ ಆದೇಶ ಹೊರಡಿಸಿದ್ದಾರೆ. 

ಇದರಿಂದಾಗಿ ಜಮ್ಮು ಕಾಶ್ಮೀರದಲ್ಲಿ ಮೈತ್ರಿಕೂಟದ ಮೂಲಕ ಸರ್ಕಾರ ರಚನೆಗೆ ಮುಂದಾಗಿದ್ದ  ಪಿಡಿಪಿ, ನ್ಯಾಷನಲ್ ಕಾನ್ಫೆರನ್ಸ್ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ಜಮ್ಮು ಕಾಶ್ಮೀರದಲ್ಲಿ ನಲ್ಡೆದ ನಾಟಕೀಯ ಬೆಳವಣಿಗೆಯೊಂದರಲ್ಲಿ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಹಾಗೂ ಪೀಪಲ್ಸ್ ಕಾನ್ಫರೆನ್ಸ್ ನ ನಾಯಕ ಸಾಜದ್ ಲೋನ್ ಸರ್ಕಾರ ರಚಿಸುವುದಕ್ಕೆ  ಪ್ರತ್ಯೇಕವಾಗಿ ಹಕ್ಕು ಮಂಡಿಸಿದ್ದರು. ಆದರೆ ಇಬ್ಬರಿಗೂ ಅವಕಾಶ ನೀಡದ ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ವಿಧಾನಸಭೆ ವಿಸರ್ಜನೆ ಆದೇಶ ಹೊರಡಿಸಿದ್ದಾರೆ. 

ಒಟ್ಟು 87 ಸದಸ್ಯರನ್ನು ಹೊಂದಿರುವ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಬಹುಮತಕ್ಕೆ 44 ಸ್ಥಾನಗಳ ಅಗತ್ಯವಿದೆ. ಸದ್ಯ ವಿಧಾನಸಭೆಯಲ್ಲಿ ಪಿಡಿಪಿ 28 ಸ್ಥಾನಗಳನ್ನು ಹೊಂದಿದ್ದು, ನ್ಯಾಷನಲ್ ಕಾನ್ಫೆರನ್ಸ್ 15 ಕಾಂಗ್ರೆಸ್ 12 ಸ್ಥಾನಗಳನ್ನು ಹೊಂದಿದೆ. ಈ ಮೂರು ಪಕ್ಷಗಳನ್ನು ಸೇರಿದರೆ ಒಟ್ಟು 55 ಸ್ಥಾನಗಳ ಬಲವನ್ನು ಹೊಂದಿವೆ. 

Trending News