ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಬುಡ್ಗಾಮ್ ಜಿಲ್ಲೆಯಲ್ಲಿ  ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕಾಜಿಪೊರಾ ಪ್ರದೇಶದಿಂದ ಭಯೋತ್ಪಾದಕನನ್ನು ಬಂಧಿಸಿದ್ದಾರೆ.


ಬಂಧಿತ ಉಗ್ರನನ್ನು ವಾರ್ಪೋರಾ ಡಿ.ಎಚ್. ಪೋರಾ ಕುಲ್ಗಂ ನಿವಾಸಿ ಶೋಕತ್ ಅಹ್ಮದ್ ತಂತರಿ ಎಂದು ಗುರುತಿಸಲಾಗಿದ್ದು, ಆತನಿಂದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ದಾಖಲೆಗಳ ಪ್ರಕಾರ, ಆತ ನಿಷೇಧಿತ ಭಯೋತ್ಪಾದಕ ಸಜ್ಜು ಎಚ್‌ಎಂ ಜೊತೆ ಒಡನಾಟ ಹೊಂದಿದ್ದ ಎನ್ನಲಾಗಿದೆ.