ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬಿನ್ನರ್ ಪ್ರದೇಶದಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ವಿವಿಧ ಸ್ಪೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಎನ್‌ಕೌಂಟರ್‌ನಲ್ಲಿ ಹತನಾದ ಭಯೋತ್ಪಾದಕನನ್ನು ಪಟ್ಟಾನ್‌ನ ಇರ್ಷಾದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ, ಈತ ಮೇ 2022 ರಿಂದ ಸಕ್ರಿಯನಾಗಿದ್ದ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಸಂಪರ್ಕ ಹೊಂದಿದ್ದ. ಇಲ್ಲಿಯವರೆಗೆ ಒಂದು ಎಕೆ ರೈಫಲ್, 30 ಸುತ್ತುಗಳ 2 ಮ್ಯಾಗಜೀನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.


ಇದನ್ನೂ ಓದಿ : 'ನಾನು ಮಾತನಾಡಲು ಆರಂಭಿಸಿದರೆ ಭೂಕಂಪನವಾಗಲಿದೆ'


ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಭಯೋತ್ಪಾದಕನೊಬ್ಬನನ್ನು ಕೊಲ್ಲಲಾಗಿದೆ. ಅಲ್ಲದೆ, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ವಿವಿಧ ಸ್ಪೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಶೋಧ ಕಾರ್ಯ ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ. 


ಶನಿವಾರ ಸಂಜೆ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆಡಿದ್ದರು. ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು. ಅಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಭದ್ರತಾ ಪಡೆಗಳಿಂದ ಪ್ರತಿದಾಳಿಯಿಂದ ಗುಂಡು ಹಾರಿಸಲು ಪ್ರಾರಂಭಿಸಿದರು. ಶನಿವಾರ ಸಂಜೆ ತಡರಾತ್ರಿ ಈ ಎನ್‌ಕೌಂಟರ್‌ ನಡೆದಿದೆ.


ಇದನ್ನೂ ಓದಿ : Ajit Doval: ಧರ್ಮದ ಹೆಸರಿನಲ್ಲಿ ಕೆಲವರು ದೇಶದ ವಾತಾವರಣವನ್ನೇ ಹಾಳುಮಾಡುತ್ತಿದ್ದಾರೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.