ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ರಾಜೀನಾಮೆ?

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಬುಧವಾರ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Last Updated : Aug 5, 2020, 11:55 PM IST
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ರಾಜೀನಾಮೆ? title=
file photo

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಬುಧವಾರ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಾರ ನಿವೃತ್ತಿಯಾಗಲಿರುವ ರಾಜೀವ್ ಮೆಹರಿಷಿ ಅವರಿಂದ ಮುರ್ಮು ಮುಂದಿನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಓದಿ: ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದ ರಾಜಕಾರಣಿ ಶಾ ಫೈಸಲ್ ಬಿಡುಗಡೆ

ಮುರ್ಮು ತಮ್ಮ ರಾಜೀನಾಮೆಯನ್ನು ಕೋವಿಂದ್‌ಗೆ ಕಳುಹಿಸಿದ್ದಾರೆ ಎಂದು ವರದಿಗಳು ಹೇಳಲಾಗಿದ್ದರೂ, ಅದನ್ನು ರಾಷ್ಟ್ರಪತಿಗಳು ಸ್ವೀಕರಿಸಿದ್ದಾರೆಯೇ ಮತ್ತು ಅದನ್ನು ಸ್ವೀಕರಿಸಲಾಗಿದೆಯೇ ಅಥವಾ ತಿರಸ್ಕರಿಸಲಾಗಿದೆಯೆ ಎಂದು ಖಚಿತಪಡಿಸಲಾಗಿಲ್ಲ.ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಅಡಿಯಲ್ಲಿ ಹೊಸ ಕೇಂದ್ರಾಡಳಿತ ಪ್ರದೇಶ ರಚನೆಯಾದ ನಂತರ ಕಳೆದ ಅಕ್ಟೋಬರ್‌ನಲ್ಲಿ ಮುರ್ಮು ಅವರನ್ನು ಜಮ್ಮು ಮತ್ತು ಕಾಶ್ಮೀರದ ಮೊದಲ ಎಲ್-ಜಿ ಆಗಿ ನೇಮಿಸಲಾಯಿತು.

ಆಡಳಿತಾರೂಢ ಬಿಜೆಪಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ಮೊದಲ ವಾರ್ಷಿಕೋತ್ಸವವನ್ನು ಸ್ಮರಿಸಿದ ದಿನದಂದು ಅವರ ರಾಜೀನಾಮೆ ಬಂದಿತು, ಇದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತು. ಇದಕ್ಕೂ ಮುನ್ನ ಬುಧವಾರ, ನಾರ್ದರ್ನ್ ಕಮಾಂಡ್‌ನ ಸೇನಾ ಕಮಾಂಡರ್ ಮುರ್ಮು ಅವರನ್ನು ಭೇಟಿ ಮಾಡಿ ಕೇಂದ್ರಾಡಳಿತ ಪ್ರದೇಶದ ಒಟ್ಟಾರೆ ಭದ್ರತಾ ನಿರ್ವಹಣೆ ಕುರಿತು ಚರ್ಚಿಸಿದ್ದರು.

Trending News