ಶ್ರೀನಗರ: ಜಮ್ಮು ಮತ್ತು ಕಾಶ್ಮೀರ(Jammu-Kashmir)ದ ಬಾರಾಮುಲ್ಲಾದಲ್ಲಿ ಬುಧವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಎಸ್‌ಪಿಒ ಮತ್ತು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಇದನ್ನು ದೃಢಪಡಿಸಿದ್ದು, ದಾಳಿಕೋರರನ್ನು ಹಿಡಿಯಲು ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಪೊಲೀಸರ ಪ್ರಕಾರ, ಬುಧವಾರ, ವಾರ್ಪೋರಾ ಪೊಲೀಸ್ ಪೋಸ್ಟ್ ಬಳಿ ಪೊಲೀಸ್ ತಂಡದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಎಸ್‌ಪಿಒ ವಜಾಹತ್ ಅಹ್ಮದ್ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪೊಲೀಸ್ ಗಾಯಗೊಂಡಿದ್ದು, ನಾಗರಿಕ ಶೌಕತ್ ಖಂಡೇಯಾ ಕೂಡ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದರು, ನಂತರ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಗಾಯಗೊಂಡ ಸೈನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.


ಗುಂಡಿನ ದಾಳಿ ನಡೆಸಿದ ನಂತರ ಭಯೋತ್ಪಾದಕರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ ಎಂದು ಸೊಪೋರ್ ಎಸ್ಪಿ ಜಾವೇದ್ ಇಕ್ಬಾಲ್ ಹೇಳಿದ್ದಾರೆ. ಈ ದಾಳಿಯಲ್ಲಿ ಮತ್ತೊಬ್ಬ ನಾಗರಿಕ ಶೌಕತ್ ಅಹ್ಮದ್‌ಗೆ ಗಂಭೀರ ಗಾಯಗಳಾಗಿವೆ. ದಾಳಿಯ ನಂತರ, ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.