ಬಡ್ಗಾಮ್:  ಜಮ್ಮು ಮತ್ತು ಕಾಶ್ಮೀರದ ಬಡ್ಗಾಮ್ ನಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆ ನಡೆಸಿದ  ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಬಡ್ಗಮ್ ಜಿಲ್ಲೆಯ ಗೋಪಾಲ್ಪೊರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮನಡೆದ ಗುಂಡಿಯ ಚಕಮಕಿಯಲ್ಲಿ ಈ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಎನ್ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಯುದ್ಧಸಾಮಗ್ರಿಗಳನ್ನು ಒಳಗೊಂಡಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಮತ್ತು ಅವರು ಯಾರು ಎಂಬುದು ಇನ್ನೂ ಗುರುತಿಸಲಾಗಿಲ್ಲ.


"ಬಡ್ಗಾಮ್ ಜಿಲ್ಲೆಯ ಚಡೋರಾದ ಗೋಪಾಲ್ಪೊರಾ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಂಗಳವಾರ ಮಧ್ಯರಾತ್ರಿ ದಾಳಿ ನಡೆಸಿದ ಭದ್ರತಾ ಪಡೆ ಬುಧವಾರ ಬೆಳಗಿನ ಜಾವದವರೆಗೂ ಶೋಧ ಕಾರ್ಯಾಚರಣೆ ಮುಂದುವರೆಸಿತ್ತು. ಈ ಸಂದರ್ಭದಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ನಡೆದ ಗುಂಡಿನ ಕಾಳಗ ನಡೆದು, ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ. 


ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.