Srinagar Encounter: ಜಮ್ಮು ಮತ್ತು ಕಾಶ್ಮೀರದ  (Jammu-Kashmir)  ಶ್ರೀನಗರದಲ್ಲಿ  (Srinagar) ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು (Security Forces) ಮಹತ್ವದ ಕ್ರಮ ಕೈಗೊಂಡಿವೆ. ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು  (Terrorists) ಹತ್ಯೆಗೈದಿದ್ದಾರೆ. ಶ್ರೀನಗರದ ಪಂಥಾ ಚೌಕ್ ಪ್ರದೇಶದಲ್ಲಿ (Pantha Chowk) ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ (Encounter) ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ  3 ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಲಾಗಿದ್ದು, ಹತ್ಯೆಗೀಡಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಳೆದ 36 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 9 ಉಗ್ರರನ್ನು ಹತ್ಯೆ ಮಾಡಲಾಗಿದೆ. ಆದಾಗ್ಯೂ, ಎನ್‌ಕೌಂಟರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ  (Jammu-Kashmir Police) ಮೂವರು ಸಿಬ್ಬಂದಿ ಮತ್ತು ಒಬ್ಬ ಸಿಆರ್‌ಪಿಎಫ್ (CRPF) ಯೋಧ ಕೂಡ ಗಾಯಗೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಉಗ್ರರ ವಿರುದ್ಧ ಮಹತ್ವದ ಕ್ರಮ:
ಶ್ರೀನಗರದಲ್ಲಿ  (Srinagar) ನಡೆದ ಎನ್‌ಕೌಂಟರ್‌ನಲ್ಲಿ ಹತರಾದ 3 ಭಯೋತ್ಪಾದಕರಿಂದ ಭದ್ರತಾ ಪಡೆಗಳು (Security Forces) ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಎನ್‌ಕೌಂಟರ್ ಆರಂಭವಾದ ಬಳಿಕ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ. ಮೊದಲು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ ಎಂದು ವರದಿಯಾಗಿದೆ.


ಇದನ್ನೂ ಓದಿ-  Indian Railway : ರೈಲ್ವೆ ಪ್ರಯಾಣಿಕರ ಗಮನಕ್ಕೆ : ಈ ಮಹತ್ವದ ನಿಯಮ ಬದಲಿಸಲಿದೆ ರೈಲ್ವೆ ಇಲಾಖೆ


ಉಗ್ರರಿಂದ ಮದ್ದುಗುಂಡು ವಶಪಡಿಸಿಕೊಳ್ಳಲಾಗಿದೆ:
ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಭಯೋತ್ಪಾದಕರ ಹತ್ಯೆಯನ್ನು ಖಚಿತಪಡಿಸಿದ್ದಾರೆ. ಪಂಥಾ ಚೌಕ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ (Encounter) ಮೂವರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದಾರೆ. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಗುಂಡಿನ ದಾಳಿಯಲ್ಲಿ 4 ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ- Pakistan:ಬಯಲಾಯ್ತು ಪಾಕ್ ಕರಾಳ ಮುಖ.. ಉಗ್ರನ ಪತ್ನಿ ಬಿಚ್ಚಿಟ್ಟ ಭೀಕರ ಸತ್ಯವಿದು


ಪಾಕಿಸ್ತಾನದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ:
ಗಮನಾರ್ಹ ಸಂಗತಿಯೆಂದರೆ, ಕಳೆದ 36 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಮೂರು ಎನ್‌ಕೌಂಟರ್‌ಗಳು ನಡೆದಿವೆ. ಕೊನೆಯ ಎರಡು ಎನ್‌ಕೌಂಟರ್‌ಗಳು ದಕ್ಷಿಣ ಕಾಶ್ಮೀರದ ಎರಡು ವಿಭಿನ್ನ ಜಿಲ್ಲೆಗಳಲ್ಲಿ ನಡೆದಿದ್ದು, ಇದರಲ್ಲಿ 6 ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು  (Terrorists) ಹತರಾಗಿದ್ದಾರೆ. ಈ ಪೈಕಿ ಇಬ್ಬರು ಉಗ್ರರು ಪಾಕಿಸ್ತಾನದವರು. ಹತರಾದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.


2021 ರಲ್ಲಿ 87 ನೇ ಬಾರಿಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ. ಕಣಿವೆ ರಾಜ್ಯದಲ್ಲಿ ಈ ವರ್ಷ ಇಲ್ಲಿಯವರೆಗೆ 171 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.