ಕಾಶ್ಮೀರದಲ್ಲಿ ಪ್ರತೀಕಾರ ತೀರಿಸಿಕೊಂಡ ಸೇನೆ: ಬಾರಾಮುಲ್ಲಾದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

Jammu-Kashmir Encounter Update: ಉರಿ, ಹತ್ಲಂಗಾ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ಭಾರತೀಯ ಸೇನೆ ಮತ್ತು ಬಾರಾಮುಲ್ಲಾ ಪೊಲೀಸರ ನಡುವೆ ಎನ್‌’ಕೌಂಟರ್ ಆರಂಭವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ

Written by - Bhavishya Shetty | Last Updated : Sep 16, 2023, 12:33 PM IST
    • ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌’ಕೌಂಟರ್
    • ಎನ್‌’ಕೌಂಟರ್‌’ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ.
    • ಇಬ್ಬರು ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು
ಕಾಶ್ಮೀರದಲ್ಲಿ ಪ್ರತೀಕಾರ ತೀರಿಸಿಕೊಂಡ ಸೇನೆ: ಬಾರಾಮುಲ್ಲಾದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ title=
Jammu and Kashmir

Jammu-Kashmir Encounter Update: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌’ಕೌಂಟರ್ ಮುಂದುವರೆದಿದೆ. ಎನ್‌’ಕೌಂಟರ್‌’ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ.

ಇದನ್ನೂ ಓದಿ: ಕರಣ್ ಜೋಹರ್ ಮುಂದಿನ ಸಿನಿಮಾದಲ್ಲಿ ಸಲ್ಲು ಜತೆ ರೊಮ್ಯಾನ್ಸ್ ಮಾಡೋ ಆ ಸೌತ್‌ ನಟಿ ಯಾರು?

ಸದ್ಯ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಜಂಟಿ ತಂಡದಿಂದ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಉರಿ, ಹತ್ಲಂಗಾ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ಭಾರತೀಯ ಸೇನೆ ಮತ್ತು ಬಾರಾಮುಲ್ಲಾ ಪೊಲೀಸರ ನಡುವೆ ಎನ್‌’ಕೌಂಟರ್ ಆರಂಭವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಬಾರಾಮುಲ್ಲಾದಲ್ಲಿ ಇಬ್ಬರು ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಭದ್ರತಾ ಪಡೆಗಳು ಪೊಲೀಸರೊಂದಿಗೆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಶೋಧ ಕಾರ್ಯಾಚರಣೆ ಆರಂಭವಾದ ಕೂಡಲೇ ಉಗ್ರರು ಭದ್ರತಾ ಪಡೆಗಳು ಮತ್ತು ಪೊಲೀಸರ ಮೇಲೆ ಗುಂಡು ಹಾರಿಸಿದ್ದರು, ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಇಬ್ಬರು ಭಯೋತ್ಪಾದಕರನ್ನು ಕೊಂದು ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಇದನ್ನೂ ಓದಿ: ತನ್ನದೇ ತಂಡದ ಆಟಗಾರರಗೆ ಬಾಯಿಗೆ ಬಂದಂತೆ ಬೈದ ಬಾಬರ್ ಅಜಂ! ಮೈದಾನದಲ್ಲೇ ಕಣ್ಣೀರಿಟ್ಟ ಪ್ಲೇಯರ್ಸ್

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌’ನಲ್ಲಿ ಉಗ್ರರ ವಿರುದ್ಧ ಸೇನೆಯ ಅತಿದೊಡ್ಡ ಕಾರ್ಯಾಚರಣೆ ನಾಲ್ಕನೇ ದಿನವೂ ಮುಂದುವರಿದಿದೆ. 80 ಗಂಟೆಗಳಿಗೂ ಹೆಚ್ಚು ಕಾಲ ಸೇನಾ ಕಾರ್ಯಾಚರಣೆ ನಡೆಯುತ್ತಿದೆ. ಮಾಹಿತಿ ಪ್ರಕಾರ ದಟ್ಟ ಅರಣ್ಯದಲ್ಲಿ ಉಗ್ರರು ಅಡಗಿದ್ದು, ಸೇನೆಯು ಭಯೋತ್ಪಾದಕರ 6 ಅಡಗು ತಾಣಗಳನ್ನು ಧ್ವಂಸಗೊಳಿಸಿದೆ. ಇದಲ್ಲದೇ ಭಯೋತ್ಪಾದಕರು ಇರುವ ಸ್ಥಳವನ್ನು ಪತ್ತೆ ಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News