ನವದೆಹಲಿ: ಜಮ್ಮು ಮತ್ತು ಕಾಶ್ಮೀರ (Jammu And Kashmir) ದಲ್ಲಿ ವ್ಯಾಪಾರ ಮತ್ತು ಉದ್ಯೋಗವನ್ನು ಹೆಚ್ಚಿಸಲು 1,350 ಕೋಟಿ ರೂ.ಗಳ ಬೃಹತ್ ಪ್ಯಾಕೇಜ್ ಘೋಷಿಸಲಾಗಿದೆ. ಅಷ್ಟೇ ಅಲ್ಲ, ಜಮ್ಮು ಮತ್ತು ಕಾಶ್ಮೀರ ಆಡಳಿತವು ರೈತರಿಗೆ ಮತ್ತು ವ್ಯಾಪಾರಿಗಳಿಗೆ ಪರಿಹಾರ ನೀಡಲು 1 ವರ್ಷದವರೆಗೆ ಶೇ.50ರಷ್ಟು ವಿದ್ಯುತ್ ಹಾಗೂ ನೀರಿನ ಬಿಲ್ಗಳನ್ನು ಮನ್ನಾ ಮಾಡಿದೆ.
Also Read- ಕೊರೋನಾ ಬಿಕ್ಕಟ್ಟು : 20 ಲಕ್ಷ ಕೋಟಿ ರೂ.ಆರ್ಥಿಕ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ
ಈ ಕುರಿತು ಹೇಳಿಕೆ ನೀಡಿರುವ ಲೆಫ್ಟ್ ನೆಂಟ್ ಗವರ್ನರ್ ಮನೋಜ್ ಸಿನ್ಹಾ, ಈ ಆರ್ಥಿಕ ಪ್ಯಾಕೇಜ್ ಮುಖ್ಯವಾಗಿ ಸಂಕಷ್ಟದಲ್ಲಿ ಸಿಲುಕಿದ ಸಂಸ್ಥೆಗಳು, ಪ್ರವಾಸೋದ್ಯಮ ಹಾಗೂ ಸಾರಿಗೆ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಕೆಲಸ ಮಾಡಲಿದೆ ಎಂದಿದ್ದಾರೆ. ಆಗಸ್ಟ್ 15 ರಂದು ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನಂತರ ಮೆಗಾ ಪ್ಯಾಕೇಜ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಳೆದ ಒಂದು ವರ್ಷದ ಹಿಂದೆಯೇ ಈ ರಾಜ್ಯ ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಗೆ ಸೇರಿದೆ ಎಂಬುದು ಇಲ್ಲಿ ಗಮನಾರ್ಥ.
Also Read- 'ಮೇಕ್ ಇನ್ ಇಂಡಿಯಾ' ಮತ್ತು 'ಮೇಡ್ ಫಾರ್ ವರ್ಲ್ಡ್' ಉತ್ಪನ್ನಗಳನ್ನು ತಯಾರಿಸುವಂತೆ ಪ್ರಧಾನಿ ಮೋದಿ ಕರೆ
ಆಗಸ್ಟ್ 18 ರಂದು ಬ್ಯಾಂಕಿಂಗ್, ಕೈಗಾರಿಕೆ, ಪ್ರವಾಸೋದ್ಯಮ, ಕೃಷಿ ಮತ್ತು ಕರಕುಶಲ ವಸ್ತುಗಳನ್ನು ಉತ್ತೇಜಿಸಲು ಅಗತ್ಯವಾದ ಸಹಾಯವನ್ನು ಕಂಡುಹಿಡಿಯಲು ಸಮಿತಿಯನ್ನು ರಚಿಸಲಾಗಿತ್ತು. ಶ್ರೀನಗರ ಮತ್ತು ಜಮ್ಮುವಿನ ಕನಿಷ್ಠ 35 ವ್ಯಾಪಾರ ಸಂಸ್ಥೆಗಳೊಂದಿಗೆ ಸುದೀರ್ಘ ಸಮಾಲೋಚನೆಯ ನಂತರ ಸೆಪ್ಟೆಂಬರ್ 1 ರಂದು ಸಮಿತಿ ತನ್ನ ವರದಿಯನ್ನು ಸಲ್ಲಿಸಿತ್ತು ಎಂದು LG ಹೇಳಿದ್ದಾರೆ.
Also Read- Local Toysಗಳಿಗೆ Vocal ಆಗುವ ಸಮಯ ಕೂಡಿಬಂದಿದೆ: ಪ್ರಧಾನಿ ಮೋದಿ
ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ಎಲ್ಜಿ ಸಿನ್ಹಾ ಸ್ವೀಕರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸರ್ಕಾರ ತಮ್ಮ ಜೀವನೋಪಾಯ ಕಳೆದುಕೊಂಡವರಿಗೆ ಶಕ್ತಿ ತುಂಬಲು ಸರ್ಕಾರ ಕೆಲಸ ಮಾಡಲಿದೆ ಎಂದು ಹೇಳಿದೆ. ಅಷ್ಟೇ ಅಲ್ಲ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ 'ವೋಕಲ್ ಫಾರ್ ಲೋಕಲ್' ಅಭಿಯಾನಕ್ಕೆ ಬಲ ತುಂಬುವ ಉದ್ದೇಶದಿಂದ ಇತರ ಉದ್ಯೋಗಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸಲಾಗುವುದು ಎಂದು ಸರಕಾರ ಹೇಳಿದೆ.