Jammu Kashmir: ಅನಂತನಾಗ್‌ನಲ್ಲಿ ಭದ್ರತಾ ಪಡೆಗಳ ಪ್ರಮುಖ ಕಾರ್ಯಾಚರಣೆ, ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ 2-3 ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದಿರುವ  ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಭಯೋತ್ಪಾದಕರನ್ನು ಸುತ್ತುವರಿದಿವೆ. ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ಮುಂದುವರಿದಿದೆ.

Written by - Zee Kannada News Desk | Last Updated : Dec 24, 2021, 09:05 AM IST
  • ಅರ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್
  • ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಉಗ್ರರನ್ನು ಸುತ್ತುವರಿದಿವೆ
  • 2-3 ಉಗ್ರರು ಸ್ಥಳದಲ್ಲಿ ಅಡಗಿ ಕುಳಿತಿರಬಹುದು ಎಂದು ಮಾಹಿತಿ ಲಭ್ಯವಾಗಿದೆ
Jammu Kashmir: ಅನಂತನಾಗ್‌ನಲ್ಲಿ ಭದ್ರತಾ ಪಡೆಗಳ ಪ್ರಮುಖ ಕಾರ್ಯಾಚರಣೆ, ಓರ್ವ ಉಗ್ರನ ಹತ್ಯೆ  title=
Jammu Kashmir Encounter

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಭಯೋತ್ಪಾದಕರನ್ನು ಸುತ್ತುವರೆದಿವೆ. ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆದರೆ, ಹತ್ಯೆಗೀಡಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಅನಂತನಾಗ್‌ನ  ಅರ್ವಾನಿ ಪ್ರದೇಶದಲ್ಲಿ 2-3 ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿರುವ ಭದ್ರತಾ ಪಡೆಗಳು ಪ್ರದೇಶವನ್ನು ಎಲ್ಲಾ ಕಡೆಯಿಂದಲೂ ಸುತ್ತುವರೆದಿವೆ. ಈ ಸಮಯದಲ್ಲಿ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಪ್ರತ್ಯುತ್ತರವಾಗಿ, ಭದ್ರತಾ ಪಡೆ ಸಹ ಗುಂಡು ಹಾರಿಸಿದ್ದು ಓರ್ವ ಉಗ್ರನನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಸ್ಥಳದಲ್ಲಿ ಭದ್ರತಾ ಪಡೆಗಳು (Security Forces) ಮತ್ತು ಉಗ್ರರ ನಡುವೆ ಎನ್‌ಕೌಂಟರ್ ಮುಂದುವರಿದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ- UP Assembly Polls 2022: ವಾರಣಾಸಿಯಲ್ಲಿ 27 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಇತ್ತೀಚೆಗಷ್ಟೇ ಅನಂತ್‌ನಾಗ್‌ನ ಚೆಕ್‌ಪಾಯಿಂಟ್‌ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ (Jammu Kashmir police) ಎಎಸ್ಐ ಮೊಹಮ್ಮದ್ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದಾರು. ಇದರ ನಂತರ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಮಾರ್ಗಮಧ್ಯೆ ಅವರು ಹುತಾತ್ಮರಾಗಿದ್ದರು.

ಇದನ್ನೂ ಓದಿ- ಅಯೋಧ್ಯೆ ಭೂ ಹಗರಣವನ್ನು ಸುಪ್ರೀಂ ಕೋರ್ಟ್‌ ತನಿಖೆಗೆ ಒಳಪಡಿಸಬೇಕು: ಪ್ರಿಯಾಂಕಾ ಗಾಂಧಿ

ಇದಲ್ಲದೆ ಕೆಲವು ದಿನಗಳ ಹಿಂದೆ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹತ್ಯೆಗೈದಿರುವುದು ಗಮನಿಸಬೇಕಾದ ಸಂಗತಿ. ಈ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News