Jammu-Kashmir: ಬುಡ್ಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನ ಹತ್ಯೆ, ಮುಂದುವರೆದ ಶೋಧ ಕಾರ್ಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಬೃಹತ್ ಅಭಿಯಾನವನ್ನು ನಡೆಸಲಾಗುತ್ತಿದೆ.

Written by - Zee Kannada News Desk | Last Updated : Aug 7, 2021, 11:00 AM IST
  • ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಬೃಹತ್ ಅಭಿಯಾನ
  • ಬುದ್ಗಾಮ್ ಜಿಲ್ಲೆಯ ಮೋಚ್ವಾ ಪ್ರದೇಶದಲ್ಲಿ ಭಯೋತ್ಪಾದಕನ ಹತ್ಯೆ
  • ಆತನಿಂದ ಎಕೆ -47 ರೈಫಲ್ ಮತ್ತು ಪಿಸ್ತೂಲ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರು
Jammu-Kashmir: ಬುಡ್ಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನ ಹತ್ಯೆ, ಮುಂದುವರೆದ ಶೋಧ ಕಾರ್ಯ title=
Representational Image

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮೋಚ್ವಾ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆಗೈಯಲಾಗಿದೆ. ಆತನಿಂದ ಎಕೆ -47 ರೈಫಲ್ ಮತ್ತು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಮುಂದುವರೆದ ಶೋಧ ಕಾರ್ಯಾಚರಣೆ:
ಇದಕ್ಕೂ ಮುನ್ನ, ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ  ಪೊಲೀಸರು ಮತ್ತು ಸೇನೆಯ ಜಂಟಿ ತಂಡವು ಪ್ರದೇಶವನ್ನು ಸುತ್ತುವರಿದಿತ್ತು ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಈ ಸಂದರ್ಭದಲ್ಲಿ ಭಯೋತ್ಪಾದಕರು (Terrorist) ಭದ್ರತಾ ಪಡೆಗಳ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಭದ್ರತಾ ಪಡೆ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದು, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ- Encounter in Rajouri: ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

ಏಳನೇ ಭಯೋತ್ಪಾದಕ ಘಟನೆ:
ನಿನ್ನೆಯಷ್ಟೇ, ತನ್ನಮಂಡಿ ತಹಸಿಲ್‌ನ ಪಂಗೈ ಹಳ್ಳಿಯ ಅರಣ್ಯ ಪ್ರದೇಶದಲ್ಲಿ ಪಾಕಿಸ್ತಾನದ ದೊಡ್ಡ ಪಿತೂರಿಯು ಬಯಲಾಗಿದೆ. ರಾಜೋರಿ (Rajouri) ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ನಡೆದ ಏಳನೇ ಭಯೋತ್ಪಾದಕ ಘಟನೆ ಇದಾಗಿದೆ. ರಾಜೋರಿಯನ್ನು ಮತ್ತೆ ಭಯೋತ್ಪಾದನೆಯ ಬೆಂಕಿಯಲ್ಲಿ ಎಸೆಯಲು ಸಂಚು ರೂಪಿಸಲಾಗುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ- IRCTC iPay: ಐಆರ್‌ಸಿಟಿಸಿ ಪಾವತಿ ಗೇಟ್‌ವೇ ಬಳಸುವುದು ಹೇಗೆ? ಅದರ ಪ್ರಯೋಜನಗಳೇನು?

ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ವಿಶೇಷ ಕಾರ್ಯಾಚರಣೆ:
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಬೃಹತ್ ಅಭಿಯಾನವನ್ನು ನಡೆಸಲಾಗುತ್ತಿದೆ. ಕಳೆದ ಹಲವು ದಿನಗಳಿಂದ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು, ಸೈನಿಕರು ನಿರಂತರವಾಗಿ ಗಸ್ತು ತಿರುಗುತ್ತಿದ್ದಾರೆ ಮತ್ತು ಭಯೋತ್ಪಾದಕರನ್ನು ಹುಡುಕುತ್ತಿದ್ದಾರೆ. ಕಣಿವೆ ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಹಲವು ಭಯೋತ್ಪಾದಕರನ್ನು ಮಟ್ಟಹಾಕಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News