ನವದೆಹಲಿ: ದೆಹಲಿ ಮತ್ತು ಹರ್ಯಾಣ ರಾಜ್ಯಗಳನ್ನು ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ ಸಿಬಿಎಸ್ಇ 10ನೇ ತರಗತಿ ವಿದ್ಯಾರ್ಥಿಗಳು ಗಣಿತ ಮರು ಪರೀಕ್ಷೆ ಅಗತ್ಯವಿಲ್ಲ ಎಂದು ತಿಳಿಸುವ ಮೂಲಕ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಸಿಬಿಎಸ್ಇ 10ನೇ ತರಗತಿ ಮರು ಪರೀಕ್ಷೆ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.


COMMERCIAL BREAK
SCROLL TO CONTINUE READING

ಸಿಬಿಎಸ್ಇ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) ಬೋರ್ಡ್ 10ನೇ ತರಗತಿ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಬೇಕೆಂದು ತಿಳಿಸಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್, ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದ 16 ಲಕ್ಷ ವಿದ್ಯಾರ್ಥಿಗಳಲ್ಲಿ, 14 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವಂತಿಲ್ಲ ಎಂದು ದೃಢಪಡಿಸಿದ್ದಾರೆ. 


ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಸಚಿವರು, ದೆಹಲಿ ಮತ್ತು ಹರಿಯಾಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವೇಳೆ ಬೃಹತ್ ಪ್ರಮಾಣದಲ್ಲಿ ಸೋರಿಕೆ ಪತ್ತೆಯಾದರೆ ಮಾತ್ರ ಮರುಪರೀಕ್ಷೆ ನಡೆಯಲಿದೆ ಎಂದು ಹೇಳಿದರು.


10ನೇ ತರಗತಿ ಗಣಿತ ಮತ್ತು 12ನೇ ತರಗತಿ ಅರ್ಥಶಾಸ್ತ್ರ ವಿಷಯಗಳ ಮರು ಪರೀಕ್ಷೆಯ ಬಗ್ಗೆ ಗೊಂದಲಕ್ಕೆ ಜವಾಡೇಕರ್ ಅವರು ಸುದ್ದಿ ಚಾನಲ್ಗಳನ್ನು ಗುರಿಯಾಗಿಸಿಕೊಂಡರು. ಇದಲ್ಲದೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹೆಸರುಗಳನ್ನು ಉಲ್ಲೇಖಿಸಿರುವ ಅವರು, ಈ ರಾಜ್ಯಗಳ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಟ್ವೀಟ್ಗಳ ಸರಣಿಯಲ್ಲಿ ಅವರು ಹೀಗೆ ಹೇಳಿದರು:
"ಜಮ್ಮು-ಕಾಶ್ಮೀರ, ಉತ್ತರಾಖಂಡ್, ಹಿಮಾಚಲ ಪ್ರದೇಶ, ಪಂಜಾಬ್, ಚಂಡೀಗಢ, ರಾಜಸ್ಥಾನ, ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳು, ಜಾರ್ಖಂಡ್, ಒಡಿಶಾ, ಆಂಧ್ರ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೆರಿ, ಅಂಡಮಾನ್, ಲಕ್ಷದ್ವೀಪ, ಕೇರಳ, ಗೋವಾ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ್, ಛತ್ತೀಸ್ಗಢ ರಾಜ್ಯಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮರುಪರೀಕ್ಷೆ ನೀಡುವುದಿಲ್ಲ".



"ಕೆಲವು ಸುದ್ದಿ ಚಾನಲ್ಗಳಲ್ಲಿ ಹಿಂತಿರುಗಿ ಗೊಂದಲಕ್ಕೊಳಗಾದ ಬಗ್ಗೆ ಮುಖ್ಯಾಂಶಗಳನ್ನು ನೋಡಲು ನಾನು ಆಶ್ಚರ್ಯ ಪಡುತ್ತೇನೆ 16 ಲಕ್ಷ ವಿದ್ಯಾರ್ಥಿಗಳಲ್ಲಿ 14 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 10ನೇ ತರಗತಿ ಗಣಿತದಲ್ಲಿ ಮರುಪರೀಕ್ಷೆ ನೀಡುವುದಿಲ್ಲ" ಎಂದು ಅವರು ಹೇಳಿದರು.



"ಪೊಲೀಸ್ ತನಿಖೆ ನಡೆಯುತ್ತಿರುವ ದೆಹಲಿ ಮತ್ತು ಹರಿಯಾಣದಲ್ಲಿ, ದೊಡ್ಡ ಪ್ರಮಾಣದಲ್ಲಿ ಸೋರಿಕೆಗೆ ಪತ್ತೆಯಾದರೆ 10ನೇ ತರಗತಿ ಗಣಿತ ವಿಷಯದ ಮರುಪರೀಕ್ಷೆ ನಡೆಸಲಾಗುವುದು."



ಸಿಬಿಎಸ್ಇ 12ನೇ ತರಗತಿಯ ಅರ್ಥಶಾಸ್ತ್ರ ಮರುಪರೀಕ್ಷೆಯು ಎಪ್ರಿಲ್‌ 25ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಕಾರ್ಯದರ್ಶಿ ಅನಿಲ್‌ ಸ್ವರೂಪ್‌ ಆವರು ಪ್ರಕಟಿಸಿದ್ದಾರೆ. ಅದೇ ರೀತಿಯಾಗಿ 10ನೇ ತರಗತಿಯ ಗಣಿತ ವಿಷಯದ ಮರುಪರೀಕ್ಷೆಯನ್ನು ಅಗತ್ಯಬಿದ್ದಲ್ಲಿ ಮಾತ್ರವೇ ದೆಹಲಿ ಹಾಗೂ ಹರ್ಯಾಣ ರಾಜ್ಯಗಳಲ್ಲಿ ನಡೆಸಲಾಗುವುದು ಎಂದು ಅವರು ತಿಳಿಸಿದ್ದರು.


ಮುಂದಿನ 15 ದಿನಗಳಲ್ಲಿ ತನಿಖೆ ಕಂಡುಕೊಳ್ಳುವ ಮಾಹಿತಿಯ ಆಧಾರದ ಮೇಲೆ ದೆಹಲಿ ಮತ್ತು ಹರಿಯಾಣದಲ್ಲಿ 10ನೇ ತರಗತಿ ಗಣಿತ ಮರು ಪರೀಕ್ಷೆಯನ್ನು ನೀಡಬೇಕೇ? ಬೇಡವೇ? ಎಂಬ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.