ಶಬನಾ ಅಜ್ಮಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ- ಪತಿ ಜಾವೇದ್ ಅಖ್ತರ್

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟಿ ಶಬಾನಾ ಅಜ್ಮಿ ಅವರು ಚಿಕಿತ್ಸೆಗೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಪತಿ ಜಾವೇದ್ ಅಖ್ತರ್ ಹೇಳಿದ್ದಾರೆ.

Updated: Jan 19, 2020 , 08:06 PM IST
 ಶಬನಾ ಅಜ್ಮಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ- ಪತಿ ಜಾವೇದ್ ಅಖ್ತರ್

ನವದೆಹಲಿ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟಿ ಶಬಾನಾ ಅಜ್ಮಿ ಅವರು ಚಿಕಿತ್ಸೆಗೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಪತಿ ಜಾವೇದ್ ಅಖ್ತರ್ ಹೇಳಿದ್ದಾರೆ.

ಪ್ರಸ್ತುತ ಅವರು ಮುಂಬೈನ ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ವೈದ್ಯಕೀಯ ಪರೀಕ್ಷೆಗಳ ಸರಣಿಯು ಸಕಾರಾತ್ಮಕವಾಗಿದೆ ಎನ್ನಲಾಗಿದೆ. ಜಾವೇದ್ ಅಖ್ತರ್ ಮಾತನಾಡಿ “ಚಿಂತಿಸಬೇಡಿ. ಅವಳು ಐಸಿಯುನಲ್ಲಿದ್ದಾಳೆ. ಆದರೆ ಎಲ್ಲಾ ಸ್ಕ್ಯಾನ್ ವರದಿಗಳು ಸಕಾರಾತ್ಮಕವಾಗಿವೆ. ಯಾವುದೇ ಗಂಭೀರ ಹಾನಿ ಸಂಭವಿಸಿಲ್ಲ ಎಂದು ತೋರುತ್ತದೆ ಎಂದು ತಿಳಿಸಿದ್ದಾರೆ. ”ಮೂಲಗಳ ಪ್ರಕಾರ, ಶಬಾನಾ ತನ್ನ ಗಾಯಗಳಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಒಂದು ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ.

ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ಡಾ.ಸಂತೋಷ್ ಶೆಟ್ಟಿ 'ಅವರು ಸ್ಥಿರ ಮತ್ತು ವೀಕ್ಷಣೆಯಲ್ಲಿದ್ದಾರೆ ಅವರಿಗೆ ಯಾವುದೇ ಅಪಾಯವಿಲ್ಲ' ಎಂದು ಅವರು ಶನಿವಾರ ಸಂಜೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶನಿವಾರದಂದು ಖಲಾಪುರ ಟೋಲ್ ಬೂತ್ ಬಳಿ ಮುಂಬೈ-ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಶಬಾನಾ ಅಜ್ಮಿ ಅವರು 'ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ್ದರಿಂದ ಗಾಯಗೊಂಡಿದ್ದರು.