close

News WrapGet Handpicked Stories from our editors directly to your mailbox

ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆಗೆ ಜೆಡಿಎಸ್ ನಿರ್ಧಾರ

ಅಕ್ಟೋಬರ್ 21 ರಂದು ರಾಜ್ಯ ವಿಧಾನಸಭಾ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದರಿಂದಾಗಿ ಈಗ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ.

Updated: Sep 21, 2019 , 03:59 PM IST
ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆಗೆ ಜೆಡಿಎಸ್ ನಿರ್ಧಾರ
Photo courtesy: ANI

ಬೆಂಗಳೂರು: ಅಕ್ಟೋಬರ್ 21 ರಂದು ರಾಜ್ಯ ವಿಧಾನಸಭಾ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದರಿಂದಾಗಿ ಈಗ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ.

17 ಕ್ಷೇತ್ರಗಳಿಗಾಗಿ ಉಪ ಚುನಾವಣೆ ನಡೆಯಬೇಕಾಗಿತ್ತು, ಆದರೆ ಮಸ್ಕಿ ಹಾಗೂ ರಾಜರಾಜೇಶ್ವರಿ ನಗರದ ಚುನಾವಣೆಗೆ ನ್ಯಾಯಾಲಯ ತಡೆ ನೀಡಿರುವ ಹಿನ್ನಲೆಯಲ್ಲಿ ಈಗ 15 ಕ್ಷೇತ್ರಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ.

ಈಗ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯತೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ' ಕುಮಾರಸ್ವಾಮಿ ಈಗಾಗಲೇ ಎಲ್ಲ 15 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಕೈಯಲ್ಲಿ ಅವರು ತೊಂದರೆ ಅನುಭವಿಸಿರುವುದರಿಂದಾಗಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಬೇಡ ಎಂದಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ಬಿಳಿಸುವಲ್ಲಿ ಯಶಸ್ವಿಯಾಗಿದ್ದ ಅನರ್ಹ ಶಾಸಕರಿಗೆ ನಿಜಕ್ಕೂ ಆತಂಕ ಎದುರಾಗಿದೆ. ಏಕೆಂದರೆ ಅವರ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ಬಳಿ ಇರುವುದರಿಂದಾಗಿ ಬೇಗನೆ ಅವರ ಪ್ರಕರಣ ಇತ್ಯರ್ಥವಾಗದೆ ಇದ್ದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಕೂಡ ಅನುಮಾನವಾಗುತ್ತದೆ.