ಪಾಟ್ನಾ: ಬಿಹಾರದಲ್ಲಿ ಬಿಟ್ಟು ಉಳಿದ ರಾಜ್ಯಗಳಲ್ಲಿ ಎನ್‌‌ಡಿಎ ಭಾಗವಾಗಿರದಿರಲು ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ನಿರ್ಧರಿಸಿದೆ. 


COMMERCIAL BREAK
SCROLL TO CONTINUE READING

ಜಾರ್ಖಂಡ್, ಜಮ್ಮು-ಕಾಶ್ಮೀರ, ಹರಿಯಾಣ ಮತ್ತು ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಜೆಡಿಯು ಹೇಳಿದ್ದು, ಭಾನುವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.


ಇತ್ತೀಚೆಗೆ ನಡೆದ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಉತ್ತಮ ಪ್ರದರ್ಶನ ನೀಡಿತ್ತು. ಈ ಬೆನ್ನಲ್ಲೇ ಇತರ ರಾಜ್ಯಗಳಲ್ಲಿಯೂ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಈ ಮೂಲಕ ಇತರ ರಾಜ್ಯಗಳಲ್ಲಿಯೂ ಪಕ್ಷ ಸಂಘಟನೆಗೆ ಮುಂದಾಗಿದೆ. 


ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು ಹಾಗೂ ಎಲ್ ಜೆಪಿಯನ್ನೊಳಗೊಂಡ ಎನ್ ಡಿಎ ಮೈತ್ರಿಕೂಟ  ಬಿಹಾರದಲ್ಲಿ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ನಿತೀಶ್ ಕುಮಾರ್ ಪಕ್ಷ 16 ಸ್ಥಾನಗಳನ್ನು ಪಡೆದುಕೊಂಡಿತ್ತು.